ರಾಜೀನಾಮೆ ನೀಡಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ?
Canadian Prime Minister Justin Trudeau to resign
ಬೆಂಗಳೂರು 06: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ, ಹಾಗೂ ತಮ್ಮ ಪಕ್ಷ ಲೀಬರಲ್ ಪಾರ್ಟಿಯ ನಾಯಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ಒಟ್ಟಾವೊದಲ್ಲಿ ಲಿಬರಲ್ ಪಕ್ಷದ ಕಾಕಸ್ ಸಮಿತಿ ಸಭೆ ನಡೆಯಲಿದೆ. ಇದಕ್ಕೂ ಮೊದಲೇ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹಲವು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಕಳೆದ ಒಂದು ತಿಂಗಳಿನಿಂದ ಟ್ರುಡೊ ಅವರ ನಾಯಕತ್ವಕ್ಕೆ ಅವರ ಪಕ್ಷದ ಸಂಸದರಿಂದಲೇ ಅಪಸ್ವರ ವ್ಯಕ್ತವಾಗಿದೆ. ಹಣಕಾಸು ಸಚಿವೆ ಕ್ರಿಸ್ಟಿನಾ ಫ್ರಿಲ್ಯಾಂಡ್ ಅವರು ಸ್ಥಾನ ತ್ಯಜಿಸಿದ್ದರು. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು.
ಖಾಲಿಸ್ತಾನ್ ಉಗ್ರರ ವಿಚಾರದಲ್ಲಿ ಇಲ್ಲಸಲ್ಲದ್ದನ್ನು ಮಾತನಾಡಿ ಭಾರತದ ಕೆಂಗಣ್ಣಿಗೂ ಜಸ್ಟಿನ್ ಟ್ರುಡೋ ಗುರಿಯಾಗಿದ್ದರು.
ಹೌಸ್ ಆಫ್ ಕಾಮನ್ಸ್‌ನಲ್ಲಿ ಲಿಬರಲ್ ಪಕ್ಷದ 153 ಸಂಸದರಿದ್ದಾರೆ. ಜಸ್ಟಿನ್ ವಿರುದ್ಧ 20 ಕ್ಕೂ ಹೆಚ್ಚು ಸಂಸದರು ಧ್ವನಿ ಎತ್ತಿದ್ದಾರೆ. ಇದರಿಂದ ಸಂಭವನೀಯ ಮುಜುಗರ ತಪ್ಪಿಸಿಕೊಳ್ಳಲು ಟ್ರುಡೋ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಟ್ರುಡೊ ರಾಜೀನಾಮೆ ನೀಡಿದರೆ ಕೆನಡಾದಲ್ಲಿ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆ. ನಿಗದಿತ ವೇಳಾಪಟ್ಟಿಯಂತೆ ಸಾರ್ವತ್ರಿಕ ಚುನಾವಣೆ ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ನಡೆಯಬೇಕು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 