ಕಾಲುವೆ ಗೇಟ್ ದುರಸ್ಥಿ ಕಾಮಗಾರಿಗೆ ಚಾಲನೆ
Canal gate repair work begins
ಸವದತ್ತಿ 09: ಈ ಭಾಗದ ರೈತರ ಜೀವನಾಡಿಯಾಗಿರುವ ಮಲಪ್ರಭಾ ಯೋಜನೆಯ ಕಾಲುವೆಗಳ ಸುಸ್ಥಿತಿ ಹಾಗೂ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಅದರಂತೆ ಮಲಪ್ರಭಾ ಬಲದಂಡೆ ಕಾಲುವೆಯ ಮುಖ್ಯ ನಿಯಂತ್ರಣ ಗೇಟುಗಳ ದುರಸ್ತಿ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಅವರು ಭೂಮಿ ಪೂಜೆ ನೆರವೇರಿಸಿದರು.
ಜಲಸಂಪನ್ಮೂಲ ಇಲಾಖೆಯ ವತಿಯಿಂದ ಸವದತ್ತಿ ವ್ಯಾಪ್ತಿಯಲ್ಲಿ ಬರುವ ಬಲದಂಡೆ ಕಾಲುವೆಯ ಮುಖ್ಯ ಗೇಟುಗಳ ಆಧುನೀಕರಣವನ್ನು ಈ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. 65 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, ಕಾಲುವೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಇದರ ಮುಖ್ಯ ಉದ್ದೇಶವಾಗಿದೆ.ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಲುವೆ ಗೇಟುಗಳ ದುರಸ್ತಿಯಿಂದ ನೀರಿನ ಸೋರಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಇದರಿಂದ ಕಾಲುವೆಯ ಕಟ್ಟಕಡೆಯ ಭಾಗದ ರೈತರ ಜಮೀನುಗಳಿಗೂ ಸಮರ್ಕವಾಗಿ ಮತ್ತು ವೇಗವಾಗಿ ನೀರು ತಲುಪಲು ಅನುಕೂಲವಾಗಲಿದೆ. ಕ್ಷೇತ್ರದ ರೈತರ ಹಿತರಕ್ಷಣೆ ಮತ್ತು ನೀರಾವರಿ ಸೌಲಭ್ಯಗಳ ಬಲವರ್ಧನೆಗೆ ನಾನು ಸದಾ ಬದ್ಧನಾಗಿದ್ದೇನೆ ಎಂದು ಹೇಳಿದರು. ನಿಗದಿತ ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು, ಪ್ರಮುಖ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ರೈತ ಮುಖಂಡರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 