ಕಾಗವಾಡ

ನಕಲಿ ಜಾತಿ ಪ್ರಮಾಣ ಪತ್ರಗಳನ್ನು ರದ್ದು ಮಾಡಿ; ತಹಶೀಲ್ದಾರ ಕಚೇರಿ ಎದುರು ಧರಣಿ..

ನಕಲಿ ಜಾತಿ ಪ್ರಮಾಣ ಪತ್ರಗಳನ್ನು ರದ್ದು ಮಾಡಿ; ತಹಶೀಲ್ದಾರ ಕಚೇರಿ ಎದುರು ಧರಣಿ..

ಕಾಗವಾಡ 13 : ತಾಲೂಕಿನಲ್ಲಿ ಎಸ್‌ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ವಿತರಣೆ ವಿರೋಧಿಸಿ, ವಾಲ್ಮೀಕಿ ಸಮುದಾಯದ ಮುಖಂಡರು ತಹಶೀಲ್ದಾರ ಕಚೇರಿ ಎದುರು ಸೋಮವಾರ ದಿ. 12 ರಿಂದ ನಿರಂತರ ಧರಣಿ ಸತ್ಯಾಗ್ರಹ ಆರಂಭಿಸಿದ್ದು, ಇಂದು 2ನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಾ ಎಸ್‌ಟಿ ಸಮಾಜದ ಅಧ್ಯಕ ರಮೇಶ ನಾಯಿಕ ಮಾತನಾಡಿ, ನಕಲಿ ಜಾತಿ ಪ್ರಮಾಣ ಪತ್ರಗಳ ಕುರಿತು ಕಳೆದ ಅನೇಕ ವರ್ಷಗಳಿಂದ ನಾವು ಹೋರಾಟ ಮಾಡುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳಿಂದ ಹಿಡಿದು, ತಹಶೀಲ್ದಾರ, ಸಹಾಯಕ ಆಯುಕ್ತರು, ಜಿಲ್ಲಾಧಿಕಾರಿಗಳಿಗೂ ಲಿಖಿತ ಮನವಿ ಸಲ್ಲಿಸಿ, ನಕಲಿ ಜಾತಿ ಪ್ರಮಾಣ ಪತ್ರ ರದ್ದು ಪಡಿಸುವಂತೆ ಒತ್ತಾಯಿಸಿದ್ದೇವೆ. ಆದರೆ ಯಾವುದೇ ಪರಿಹಾರ ದೊರೆತಿಲ್ಲ. ಆದ್ದರಿಂದ ಈಗ ತಹಶೀಲ್ದಾರರ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭಿಸಿದ್ದೇವೆ. ಇದಕ್ಕೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, ಅನಿವಾರ್ಯವಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದೇವೆ. ಇತರ ಜಾತಿಯಲ್ಲಿರುವ ಕೋಳಿ ಕೊಲಿ, ಅಂಬಿಗರು, ಕಬ್ಬಲಿಗ ಹಾಗೂ ಗಂಗಾಮತಸ್ಥ ಪ್ರವರ್ಗ-1 ತಳವಾರ ಜಾತಿಯವರು ಸುಳ್ಳು ಮಾಹಿತಿ ನೀಡಿ, ಜಾತಿ ಪ್ರಮಾಣ ಪತ್ರವನ್ನು ಪಡೆದು, ನಿಜವಾದ ಎಸ್‌ಟಿ ಸಮುದಾಯದವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರಿಂದ ನಮ್ಮ ಜಾತಿಯ ವಿದ್ಯಾರ್ಥಿಗಳಿಗೆ ನೌಕರಿಯಲ್ಲಿ ಇತರ ಮೀಸಲಾತಿಯಲ್ಲಿ ಅನ್ಯಾಯವಾಗುತ್ತಿದೆ. ಈಗ ನೀಡಿರುವ ಸುಮಾರ 1,500 ಹೆಚ್ಚು ನಕಲಿ ಜಾತಿ ಪ್ರಮಾಣ ಪತ್ರಗಳನ್ನು ರದ್ದು ಮಾಡಿ, ನಮ್ಮ ಸಮಾಜಕ್ಕೆ ನ್ಯಾಯ ಒದಗಿಸುವವರೆಗೆ ನಮ್ಮ ಧರಣಿ ಮುಂದುವರೆಯಲಿದೆ ಎಂದು ತಿಳಿಸಿದರು. 

  


ಸುದ್ದಿ ಓದಿ