ಆ.9ರಂದು ಕ್ಯಾಪ್ಟನ್ ಕಳ್ಮಠ ಸ್ಮಾರಕ ಉಪನ್ಯಾಸ
Captain Kalmath Memorial Lecture on August 9
ಲೋಕದರ್ಶನ ವರದಿ
ಧಾರವಾಡ 08 : ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಕ್ಯಾಪ್ಟನ್ ಬಿ.ಸಿ. ಕಳ್ಮಠ ಸ್ಮಾರಕದ ಅಂಗವಾಗಿ ‘ಚಲೇ ಜಾವ್ ಚಳವಳಿಯ ಹುತಾತ್ಮ ಮೈಲಾರ ಮಹಾದೇವಪ್ಪ’ ವಿಷಯ ಕುರಿತು ಸ್ಮಾರಕ ಉಪನ್ಯಾಸ ಕಾರ್ಯಕ್ರಮವನ್ನು ಆ.9ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಧಾರವಾಡ ಆಕಾಶವಾಣಿ ವಿಶ್ರಾಂತ ನಿಲಯದ ನಿರ್ದೇಶಕರಾದ ಸಿ.ಯು. ಬೆಳ್ಳಕ್ಕಿ ಅಧ್ಯಕ್ಷತೆ ವಹಿಸಲಿದ್ದು, ಧಾರವಾಡ ಹಿರೇಮಲ್ಲೂರು ಈಶ್ವರನ್ ಪ.ಪೂ. ಕಾಲೇಜಿನ ಪ್ರಾಚಾರ್ಯ ಪ್ರೊ. ಶಶಿಧರ ತೋಡಕರ್ ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ. ದತ್ತಿ ದಾನಿಗಳಾದ ಶಾರದಾ ಬಿ. ಕಳ್ಮಠ ಉಪಸ್ಥಿತರಿರುವರು.
ಸ್ವಾತಂತ್ರ್ಯ ಹೋರಾಟಗಾರ ಕ್ಯಾಪ್ಟನ್ ಬಿ.ಸಿ. ಕಳ್ಮಠ ಅವರು 1922ರಲ್ಲಿ ಧಾರವಾಡ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಜನಿಸಿದರು. ವಿದ್ಯಾರ್ಥಿಯಾಗಿದ್ದಾಗಲೇ ಸ್ವಾತಂತ್ರ್ಯ ಹೋರಾಟಗಾರ ಮೈಲಾರ ಮಹಾದೇವಪ್ಪ ಅವರ ಪ್ರಭಾವಕ್ಕೆ ಒಳಗಾಗಿ, ಶಿಕ್ಷಣ ತೊರೆದು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ್ದರು.
‘ಚಲೇ ಜಾವ್’ ಚಳವಳಿಯ ಸಂದರ್ಭದಲ್ಲಿ 1942ರ ಆಗಸ್ಟ್ 17ರಂದು ಬಂಧಿತರಾಗಿ ಆರು ತಿಂಗಳ ಶಿಕ್ಷೆಗೆ ಗುರಿಯಾಗಿದ್ದರು. 1943ರ ಫೆಬ್ರವರಿ 16ರಂದು ಬಿಡುಗಡೆಯಾದ ಬಳಿಕ ಮೈಲಾರ ಮಹಾದೇವಪ್ಪ ಸ್ಥಾಪಿಸಿದ್ದ ಕೊರಡೂರು ಆಶ್ರಮ ಸೇರಿ ಹೋರಾಟ ಮುಂದುವರಿಸಿದ್ದರು.
ದತ್ತಿ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಬಿ.ಸಿ. ಕಳ್ಮಠ ಅವರ ಕುಟುಂಬದವರು ಹಾಗೂ ಹಿತೈಷಿಗಳು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಕಾಣೆಯಾದ ನಾಟಕ, 6 ತಿಂಗಳ ಬಳಿಕ ಪ್ರಕರಣ ಬಯಲು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ 