ಕಾರು ಢಿಕ್ಕಿ; ಬ್ಯಾಡಗಿಯ ಐವರಿಗೆ ಗಾಯ
ರಾಣೀಬೆನ್ನೂರ 23: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಲಗೇರಿ ಬ್ರಿಡ್ಜ್ ಹತ್ತಿರ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಬೀದಿ ದೀಪದ ಕಂಬಕ್ಕೆ ಢಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ಬ್ಯಾಡಗಿಯ ನಾಲ್ವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಕುಮಾರಪಟ್ಟಣದ ಆರಕ್ಷಕ ಠಾಣೆಯಲ್ಲಿ ದಾಖಲುಗೊಂಡಿದೆ.