ವಿಜಯಪುರ

ಕಾರು–ಬೈಕ್ ಡಿಕ್ಕಿ: ಸವಾರನ ಸ್ಥಿತಿ ಗಂಭೀರ

ಕಾರು–ಬೈಕ್ ಡಿಕ್ಕಿ: ಸವಾರನ ಸ್ಥಿತಿ ಗಂಭೀರ



ಕೊಲ್ಹಾರ: ಪಟ್ಟಣದ ಹೊರವಲಯದಲ್ಲಿರುವ ಗಾಣದೇವಿ ವೃತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಗುರುವಾರ ರಾತ್ರಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮಂಗಳೂರು ಜಿಲ್ಲೆಯ ರಾಜೇಶ್ ಎಚ್.ಬಿ. (25) ಗಾಯಗೊಂಡ ಬೈಕ್ ಸವಾರ. ಮಾರುತಿ ಸುಜುಕಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುವಿನ ನೆರವಿಗೆ ಧಾವಿಸಿ, 108 ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಬಿ.ಎಲ್.ಡಿ.ಇ. ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ

ಸುದ್ದಿ ಓದಿ