ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು : ಪ್ರಾಣಾಪಾಯದಿಂದ ಚಾಲಕ ಪಾರು
ಬೆಳಗಾವಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಸ್ವಿಫ್ಟ್ ಡಿಜಾಯರ್ ಕಾರೊಂದು ಆಕಸ್ಮಿಕವಾಗಿ ಹೊತ್ತಿ ಉರಿದಿದ್ದು, ಚಾಲಕ ಮಾತ್ರ ಈ ಅವಘಡದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಕ್ರಾಸ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಕ್ರಾಸ್ ಬಳಿಯ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ನಿಪ್ಪಾನಿ ಕಡೆಯಿಂದ ಸಂಕೇಶ್ವರಕ್ಕೆ ಮಾರುತಿ ಸ್ವಿಫ್ಟ್ ಡಿಜಾಯರ್ ಕಾರು ಬರುತ್ತಿತ್ತು ಎನ್ನಲಾಗಿದೆ.
ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಬೆಂಕಿ ಆವರಿಸಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಈ ಕಾರು ನ್ಯಾಯವಾದಿ ಒಬ್ಬರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಕಾರಿನಲ್ಲಿ ನ್ಯಾಯವಾದಿ ಒಬ್ಬರೆ ಪ್ರಯಾಣಿಸುತ್ತಿದ್ದರು ಎಂದು ತಿಳಿದಿದೆ.