ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ

ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ Car engulfed in flames in the middle of a Belagavi road; people startled by late-night incident.

ಬೆಳಗಾವಿ : ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಆಕಸ್ಮಿಕ ವಾಗಿ ಬೆಂಕಿ ಹತ್ತಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಬೆಳಗಾವಿ ನಗರದಲ್ಲಿ ರವಿವಾರ ತಡರಾತ್ರಿ ನಡೆದಿದೆ.‌

     ಬೆಳಗಾವಿ ನಗರದ ಮುಜಾವರ ಅರ್ಕೇಡ್ ಕಟ್ಟಡ ಮುಂದಿನ ರಸ್ತೆಯಲ್ಲಿ ಈ ಘಟನೆ ರವಿವಾರ ತಡರಾತ್ರಿ ನಡೆದಿದೆ. ಸಂಚರಿಸುತ್ತಿರುವಾಗಲೇ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಬಳಿಕ ಅಲ್ಲಿ ನೆರೆದಿದ್ದ ನಾಗರಿಕರು ಅಗ್ನಿಶಾಮಕ ದಳದ ಸಿಬ್ಬಂದಿ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. 

   ಅದರೆ ಅಷ್ಟೋತ್ತಿಗೆ ಕಾರು ಅರ್ಧ ಭಾಗದಷ್ಟು ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ.