ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಮಾಲೀಕ ಪಾರು
ಬೆಂಗಳೂರು, ಜೂ.6,ಶಾರ್ಟ್ ಸರ್ಕ್ಯೂಟ್ನಿಂದಾಗಿ ಐಶಾರಾಮಿ ಕಾರೊಂದು ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ನಗರದ ಕಸ್ತೂರಬಾ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಬೆಳಗ್ಗೆ 5 ಗಂಟೆಗೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಮಯ ಪ್ರಜ್ಞೆಯಿಂದ ಬೆಂಜ್ ಕಾರು ಮಾಲೀಕ ಥಾಮಸ್ ಹೊರಗೆ ಬಂದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಇದು ಟ್ರಯಾಂಗಲ್ ಪ್ರಾಪರ್ಟಿ ಡೆವಲಪ್‌ಮೆಂಟ್ ಎಂಬ ಸಂಸ್ಥೆಗೆ ಸೇರಿದ್ದ ಕಾರು ಇದಾಗಿದೆ ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 