ವೃತ್ತಿ ಸಮಾಲೋಚನೆ, ಮಾರ್ಗದರ್ಶನ: ನೇರ ಫೋನ್-ಇನ್ ಕಾರ್ಯಕ್ರಮ
Career Counseling, Guidance: Direct Phone-in Program
ಲೋಕದರ್ಶನ ವರದಿ
ವೃತ್ತಿ ಸಮಾಲೋಚನೆ, ಮಾರ್ಗದರ್ಶನ: ನೇರ ಫೋನ್-ಇನ್ ಕಾರ್ಯಕ್ರಮ
ಬೆಳಗಾವಿ 15: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ 14ರಂದು ವೃತ್ತಿ ಸಮಾಲೋಚನೆ ಮತ್ತು ಮಾರ್ಗದರ್ಶನ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೌಲ್ಯ ಮಾಪನ ಕುಲಸಚಿವರಾದ ಡಾ. ಟಿ. ಎನ್. ಶ್ರೀನಿವಾಸ ಹಾಗೂ ವಿಟಿಯು ಶೈಕ್ಷಣಿಕ ವಿಶೇಷ ಅಧಿಕಾರಿ ಪ್ರೋ. ಸದಾಶಿವ ಹಾಲಭಾವಿ ಅವರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೌಲ್ಯ ಮಾಪನ ಕುಲಸಚಿವ ಡಾ. ಟಿ. ಎನ್. ಶ್ರೀನಿವಾಸ ಅವರು ವಿದ್ಯಾರ್ಥಿಗಳು ಅವರ ಆಸಕ್ತಿ ಹಾಗೂ ಸಾಮರ್ಥ್ಯಕ್ಕೆ ಅನುಸಾರವಾಗಿ ಕೋರ್ಸ್‌ಗಳ ಆಯ್ಕೆ ಮಾಡಿಕೊಳ್ಳಬೇಕು, ಪ್ರಸ್ತುತ ಮಾರುಕಟ್ಟೆಯಲ್ಲಿ ಯಾವ ಕೋರ್ಸ್‌ಗಳಿಗೆ ಹೆಚ್ಚು ಬೇಡಿಕೆ ಇದೆ, ಕೃತಕ ಬುದ್ಧಿ ಮತ್ತೆ (ಎಐ) ಕುರಿತು ಮತ್ತು 2025ರ ಸಿಇಟಿ ಪ್ರಕ್ರೀಯೆ ಕುರಿತು ಮಾಹಿತಿ ಹಂಚಿಕೊಂಡರು. ವಿಟಿಯು ಶೈಕ್ಷಣಿಕ ವಿಶೇಷ ಅಧಿಕಾರಿ ಪ್ರೋ. ಸದಾಶಿವ ಹಾಲಭಾವಿ ಅವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆಮಾಡಬೇಕಾದರೆ ಜ್ಞಾನ, ಕೌಶಲ್ಯ ಮತ್ತು ವರ್ತನೆಯನ್ನು ಚನ್ನಾಗಿ ಬೆಳಸಿಕೊಂಡರೆ ಖಂಡೀತ ಯಶಸ್ವಿಯಾಗುತ್ತಾರೆ ಎಂದರು ಹಾಗೂ ಕೇಳುಗಳ ಅನೇಕ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್ ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ವಿಶೇಷ ಅಧಿಕಾರಿ ಮತ್ತು ಸಿವಿಲ್ ಇಂಜೀನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಡಾ. ರೋಹನ ಗುರವ, ವೇಣುಧ್ವನಿ ಸಮುದಾಯ ಬಾನುಲಿ ಕೇಂದ್ರದ ನಿಲಯ ನಿರ್ವಾಹಕ ಡಾ. ವಿರೇಶಕುಮಾರ ನಂದಗಾಂವ, ಕಾರ್ಯಕ್ರಮ ಸಂಯೋಜಕ ಮಂಜುನಾಥ ಬಳ್ಳಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 