ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಿಖರವಾಗಿ, ಪಾರದರ್ಶಕವಾಗಿ ನಿರ್ವಹಿಸಿ: ವಿಪುಲ್ ಬನ್ಸಲ್
Carry out the voter list revision process accurately and transparently: Vipul Bansal
ಗದಗ, ಸೆ.23 (ಕರ್ನಾಟಕ ವಾರ್ತೆ): ಅರ್ಹ ಪ್ರತಿಯೊಬ್ಬ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಸೇರೆ್ಡಯಾಗುವಂತೆ ಕ್ರಮವಹಿಸುವುದು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ನಿಖರವಾಗಿ ಹಾಗೂ ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕ ಹಾಗೂ ವಾಣಿಜ್ಯ ತೆರಿಗೆಗಳ ಆಯುಕ್ತ ವಿಪುಲ್ ಬನ್ಸಲ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಸಭೆ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
18 ವರ್ಷ ಪೂರ್ಣಗೊಳಿಸಿರುವ ಯುವಕ-ಯುವತಿಯರು ಹಾಗೂ ಇದುವರೆಗೆ ಮತದಾರರ ಪಟ್ಟಿಗೆ ಸೇರೆ್ಡಯಾಗದ ಅರ್ಹ ನಾಗರಿಕರ ಹೆಸರುಗಳನ್ನು ಆದ್ಯತೆಯ ಮೇರೆಗೆ ಪಟ್ಟಿಗೆ ಸೇರೆ್ಡಗೊಳಿಸಬೇಕು. ಮತದಾರರ ಪಟ್ಟಿಯಲ್ಲಿರುವ ಹೆಸರು, ವಿಳಾಸ, ಭಾವಚಿತ್ರ ಸೇರಿದಂತೆ ತಿದ್ದುಪಡಿಗಳನ್ನು ್ಕ್ಧೂ್ಪೂಹಿ8್ಘ ಮೂಲಕ ತ್ವರಿತವಾಗಿ ಪರೀಶೀಲಿಸಿ ಸರಿಪಡಿಸಬೇಕು. ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ್ಕ್ಧೂ್ಪೂಹಿ7್ಘ ಮೂಲಕ ನಿಯಮಾನುಸಾರ ತೆಗೆದುಹಾಕಬೇಕು ಎಂದು ಸೂಚಿಸಿದರು. ಮತಗಟ್ಟೆ ಮಟ್ಟದ ಅಧಿಕಾರಿಗಳು (ಃಐಓ) ಮನೆ-ಮನೆಗೆ ಭೇಟಿ ನೀಡಿ ಪರೀಶೀಲನೆ ನಡೆಸಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 