ರೈಲ್ವೆ ಸಂಬಂಧಿತ ವಿವಿಧ ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಿ
ಬಳ್ಳಾರಿ 26: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಮ್ಮೂರು ಶೇಖರ್ ಅವರು ನೈರುತ್ಯ ರೈಲ್ವೆ ಮಂಡಳಿಯ ರೈಲ್ವೆ ಪ್ರಬಂಧಕರಾದ ಅರವಿಂದ ಮಾಲಖೆಡೆ ಅವರನ್ನು ಸೋಮವಾರ ಭೇಟಿ ಮಾಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಮನವಿ ಮಾಡಿದರು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರ ಸೂಚನೆ ಮೇರೆಗೆ ರೈಲ್ವೆ ಪ್ರಬಂಧಕರನ್ನು ಭೇಟಿಯಾಗಿ ಬಳ್ಳಾರಿ ನಗರದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಮೋತಿ ರೈಲ್ವೆ ಬ್ರಿಡ್ಜ್ ಅಗಲೀಕರಣ, ರಂಗಮಂದಿರ ಹತ್ತಿರವಿರುವ ಹಾಲಿ ರೈಲ್ವೆವೆಂಟ್ನ್ನು ಎತ್ತರಿಸುವುದು. ಅನಂತಪುರ ರಸ್ತೆಯಿಂದ ಸಂಗನಕಲ್ಲು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯಭಾಗದಲ್ಲಿನ ರೈಲ್ವೆ ಹಳಿಗೆ ಅಂಡರ್ಬ್ರಿಡ್ಜ್ ನಿರ್ಮಿಸುವ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವ ಕುರಿತು ಮನವಿ ಮಾಡಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಶೀಘ್ರವೇ ಈ ಯೋಜನೆಗಳ ಅಂದಾಜು ವೆಚ್ಚ ಪಟ್ಟಿ ತಯಾರಿಸಲು ಮತ್ತು ಎಮ್ಒಎಮ್ ಮಾಡಿ ಟೆಂಡರ್ ಕರೆಯಲು ಸಂಬಂಧಪಟ್ಟ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು. ಬುಡಾ ವತಿಯಿಂದ ಠೇವಣಿ ಇಡಲು ಅವರು ತಿಳಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಎಂಜನಿಯರ್ ಶ್ರೀಜಾ ಅವರು ಇದ್ದರು.