ಉತ್ತರ ಕಾಶ್ಮೀರದಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
ಶ್ರೀನಗರ, ಫೆ 3, ಉತ್ತರ ಕಾಶ್ಮೀರ ಜಿಲ್ಲೆಯ ಗಡಿ ಪಟ್ಟಣ ಕರ್ನಾದಲ್ಲಿ ಪಾಕಿಸ್ತಾನ ಪಡೆಗಳು ಸೋಮವಾರ ಕದನ ವಿರಾಮ ಉಲ್ಲಂಘಿಸಿ ಶೆಲ್ ಮತ್ತು ಗುಂಡಿನ ದಾಳಿ ನಡೆಸಿದೆ. ಕಳೆದ 24 ಗಂಟೆಗಳಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸಿದ ಮೂರನೇ ಪ್ರಕರಣ ಇದಾಗಿದೆ. ಪಾಕಿಸ್ತಾನ ಪಡೆಗಳು ಸೋಮವಾರ ಕರ್ನಾದಲ್ಲಿ ಸೇನಾ ನೆಲೆ ನಾಗರಿಕ ಪ್ರದೇಶವನ್ನೂ ಗುರಿಯಾಗಿಸಿಕೊಂಡು ಅಪ್ರಚೋದಿತ ಶೆಲ್ , ಮತ್ತು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ಯುಎನ್‌ಐಗೆ ತಿಳಿಸಿವೆ.
ಎರಡೂ ಕಡೆಯಲ್ಲೂ ಭಾರತೀಯ ಯೋಧರೂ ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಅವರು ಹೇಳಿದರು ಆದರೆ, ಪಾಕಿಸ್ತಾನ ಪಡೆಗೆ ಆಗಿರುವ ಸಾವು, ನೋವಿನ ಬಗ್ಗೆ ತಕ್ಷಣಕ್ಕೆ ಯಾವ ವರದಿ ಬಂದಿಲ್ಲ .ಭಾನುವಾರ, ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿ ಗುರೆಜ್‌ನ ಬಕ್ತೂರ್‌ನಲ್ಲಿ ಫಾರ್ವರ್ಡ್ ನೆಲೆಯನ್ನು ಗುರಿಯಾಗಿಸಿ ಶೆಲ್ ದಾಳಿ ನಡೆಸಿದಾಗ ಸಂದೀಪ್ ಯಾದವ್ ಯೋಧ ಸೈನಿಕ ಗಾಯಗೊಂಡಿದ್ದಾನೆ. ಕುಪ್ವಾರಾದ ತಂಗ್‌ದಾರ್ ಸೆಕ್ಟರ್‌ನಲ್ಲಿ ಭಾನುವಾರವೂ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿವೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ ಹೆಚ್ಚಿನ ಸಂಖ್ಯೆಯ ಉಗ್ರರು ಒಳನುಸುಳಲು ಕಾಯುತ್ತಿದ್ದಾರೆ ಎಂದೂ ಅವರು ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 