ಜೋರಾಗಿ ಧ್ವನಿವರ್ಧಕ ಬಳಕೆ ಮಾಡದೆ ಶಾಂತಿಯುತವಾಗಿ ಗಣೇಶೋತ್ಸವ ಆಚರಿಸಿ: ಎಸ್ಪಿ ಮಿಥುನ್ ಎಚ್.ಎನ್.
Celebrate Ganeshotsav peacefully without using loudspeakers at high volume: SP Mithun H.N.
ಲಕ್ಷ್ಮೇಶ್ವರ, ಸೆ. 9: ಸಾರ್ವಜನಿಕರ ಹಿತದೃಷ್ಟಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮಹಾಮಂಡಳಿಯವರು ಜೋರಾಗಿ ಧ್ವನಿವರ್ಧಕ (ಡಿಜೆ) ಬಳಕೆ ಮಾಡದೆ, ಶಾಂತಿ ಮತ್ತು ಸೌಹಾರ್ದತೆಯಿಂದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಎಚ್.ಎನ್. ಕರೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮಹಾಮಂಡಳಿಯವರು ಹಾಗೂ ಸಾರ್ವಜನಿಕರೊಂದಿಗೆ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅತಿಯಾದ ಡಿಜೆ ಹಾಗೂ ಧ್ವನಿವರ್ಧಕದ ಶಬ್ದದಿಂದ ವೃದ್ಧರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೋಗಿಗಳು ಹಾಗೂ ಜಾನುವಾರುಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಎಲ್ಲ ಮಂಡಳಿಯವರು ಡಿಜೆ ಬಳಕೆಯನ್ನು ತಪ್ಪಿಸಿ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದರು.
ಗಣೇಶ ಪ್ರತಿಷ್ಠಾಪನೆಯ ಅವಧಿ ಐದು, ಏಳು, ಒಂಬತ್ತು, 11 ಅಥವಾ 13 ದಿನಗಳಾಗಿದ್ದರೂ ಎಲ್ಲರಿಗೂ ಒಂದೇ ರೀತಿಯ ಕಾನೂನು ಅನ್ವಯವಾಗಬೇಕು. ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಬಳಕೆಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು.
ಗಣೇಶ ವಿಸರ್ಜನೆಗೆ ಶಾಶ್ವತ ಕೃತಕ ಹೊಂಡ ನಿರ್ಮಿಸಿ, ಪ್ರತಿವರ್ಷ ವಿಸರ್ಜನೆ ಬಳಿಕ ಅದನ್ನು ಮುಚ್ಚದೆ ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು. ವಿಸರ್ಜನಾ ಸ್ಥಳದಲ್ಲಿ ಪ್ರತಿವರ್ಷ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಅದೇ ರೀತಿ ಪಟಾಕಿ ಮಾರಾಟಕ್ಕೆ ಉಮಾ ವಿದ್ಯಾಲಯದ ಶಾಲಾ ಮೈದಾನದಲ್ಲಿ ವ್ಯವಸ್ಥೆ ಮಾಡಬೇಕು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸಿಪಿಐ ಬಿ.ವಿ. ನಾಗಮೌಗಡ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಪಿಎಸ್ಐ ಆನಂದ ಕಾರೇಕಟ್ಟಿ, ಕ್ರೈಂ ಪಿಎಸ್ಐ ಟಿ.ಕೆ. ರಾಠೋಡ, ಹೆಸ್ಕಾಂ ವಿಭಾಗದ ಸೆಕ್ಷನ್ ಅಧಿಕಾರಿ ಕಿರಣಕುಮಾರ್ ಪವಾರ್, ತಾಲೂಕು ಪಂಚಾಯಿತಿ ಕಾರ್ಯದರ್ಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣೇಶ ಪ್ರತಿಷ್ಠಾಪನಾ ಮಹಾಮಂಡಳಿಯ ಪದಾಧಿಕಾರಿಗಳು, ಹಿರಿಯ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 