ಗಣೇಶೋತ್ಸವ ಭಕ್ತಿಯಿಂದ ಆಚರಿಸಿ
Celebrate Ganeshotsava with devotion.
ಗಣೇಶೋತ್ಸವ ಭಕ್ತಿಯಿಂದ ಆಚರಿಸಿ
ಜಮಖಂಡಿ 13: ಗಣೇಶೋತ್ಸವವನ್ನು ಪ್ರತಿವರ್ಷ ಭಕ್ತಿ ಭಾವದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಯಾವುದೇ ಶುಭ ಸಮಾರಂಭಕ್ಕೂ ಮುನ್ನ ಗಣೇಶನಿಗೆ ಪೂಜೆ ಸಲ್ಲಿಸುವ ಸಂಪ್ರದಾಯವಿದೆ. ಆದರೆ ಗಣೇಶೋತ್ಸವವನ್ನು ಕೇವಲ ಆಡಂಬರಕ್ಕೆ ಸೀಮಿತಗೊಳಿಸದೆ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಬೇಕು ಎಂದು ಮುತ್ತಿನಕಂತಿ ಮಠದ ಶಿವಲಿಂಗ ಪಂಡಿತರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು.
ನಗರದ ಮುತ್ತಿನಕಂತಿ ಮಠದ ಸಭಾಭವನದಲ್ಲಿ ನಡೆದ ಗಜಾನನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಹಿನ್ನೆಲೆಯ ಪೂರ್ವಭಾವಿ ಸಭೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಗಣೇಶೋತ್ಸವದ ಸಂದರ್ಭದಲ್ಲಿ ಮೆರವಣಿಗೆ ಹಾಗೂ ವಿಸರ್ಜನೆಯನ್ನು ಶಾಂತಿಯುತವಾಗಿ ನಡೆಸಬೇಕು. ಪ್ರತಿನಿತ್ಯ ಗಣೇಶನಿಗೆ ಪೂಜೆ ಸಲ್ಲಿಸಬೇಕು. ಅಶ್ಲೀಲ ಹಾಡುಗಳನ್ನು ಹಾಕುವುದನ್ನು ತಪ್ಪಿಸಬೇಕು. ಇಂತಹ ಆಚರಣೆಗಳು ಮುಂದಿನ ಪೀಳಿಗೆಯ ಮಕ್ಕಳ ಮೇಲೂ ಪರಿಣಾಮ ಬೀರುವುದರಿಂದ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಮದ್ಯಪಾನ ಹಾಗೂ ಧೂಮಪಾನದಿಂದ ದೂರವಿದ್ದು, ಭಕ್ತಿ ಭಾವದಿಂದ ಹಬ್ಬವನ್ನು ಆಚರಿಸಬೇಕು. ಪರಿಸರ, ವಾಯು ಹಾಗೂ ಜಲ ಮಾಲಿನ್ಯ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಡಾ, ರಾಕೇಶ ಲಾಡ ಮಾತನಾಡಿ, ನಗರದ ಮೂರು ಕಡೆಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಂಡಗಳನ್ನು ನಿರ್ಮಿಸಲಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರದೀಪ ಮೆಟ್ಟಗುಡ್ಡ, ಮಹಾಮಂಡಳ ಅಧ್ಯಕ್ಷ ಹೀರಾ ಜಾಧವ ಸೇರಿದಂತೆ ಗಣೇಶೋತ್ಸವ ಸಮಿತಿಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 