ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ: ಅಪರ ಜಿಲ್ಲಾಧಿಕಾರಿ ಓದ್ರಾಮ
ಲೋಕದರ್ಶನ ವರದಿ
ವಿಜಯಪುರ.18 : ಜಿಲ್ಲೆಯಲ್ಲಿ ಆಚರಿಸಲಾಗುವ ಶ್ರೀ ನೂಲಿ ಚಂದಯ್ಯ ಜಯಂತಿ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ, ಶ್ರೀ ಕೃಷ್ಣ ಜಯಂತಿ ಹಾಗೂ ವಿಶ್ವಕರ್ಮ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಓದ್ರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಗಸ್ಟ್ 28ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗುವುದು. ಈ ಸಂದರ್ಭದಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.ಶ್ರೀ ನೂಲಿ ಚಂದಯ್ಯಅವರ ಜಯಂತಿ ಅಂಗವಾಗಿ ಬೆಳಿಗ್ಗೆ 9.30 ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿ ನಗರದ ಪ್ರಮುಖ ವೃತ್ತಗಳ ಮೂಲಕ ಸಂಚರಿಸಿ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮುಕ್ತಾಯಗೊಳ್ಳಲಿದೆ.