ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಿ: ರಾಕೇಶ್ ಬಗಲಿ
Celebrate the festival peacefully: Rakesh Bagali
ಇಂಡಿ 17: ತಾಲ್ಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಶ್ರೀ ಮರುಳಸಿದ್ದೇಶ್ವರ ಜಾತ್ರೆ ನಿಮಿತ್ತವಾಗಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಶಾಂತಿ ಸೌಹಾರ್ದತೆಯೊಂದಿಗೆ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಆಚರಿಸಿ ಎಂದು ಹೋರ್ತಿ ಪೋಲಿಸ್ ಠಾಣೆಯ ಪಿಎಸ್‌ಐ ರಾಕೇಶ್ ಬಗಲಿ ಹೇಳಿದರು.
ಅವರು ಇಂದು ರವಿವಾರ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಶ್ರೀ ಮರುಳಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು, ಇಲ್ಲಿನ ಪೊಲೀಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆ ನಿಮಿತ್ತ ಶಾಂತಿ ಪಾಲನಾ ಸಭೆಯ ಉದ್ದೇಶಿ ಮಾತನಾಡಿದ ಪಿ.ಎಸ್.ಐ. ರಾಕೇಶ್ ಬಗಲಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಮರುಳಸಿದ್ದೇಶ್ವರ ಜಾತ್ರೆಯ ನಿಮಿತ್ಯವಾಗಿ ನಡಿಯುವ ಪಲ್ಲಕ್ಕಿ ಉತ್ಸವ ಹಾಗೂ ಗೀ ಗೀ ಪದಗಳು ಕುಸ್ತಿ ಹಾಗೂ ನಾಟಕ ಪ್ರದರ್ಶನ ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ಸೂಕ್ತ ಪೋಲಿಸ್ ಬಂದು ಬಸ್ತ ನೀಡಲಾಗುವುದು ಹಾಗೂ ಗಜಾನನ ಪ್ರತಿಷ್ಠಾನ ಕ್ಕಿಂತ ಮುಂಚೆ ಪಂಚಾಯಿತಿಯಿಂದ ಹಾಗೂ ನಮ್ಮ ಪೋಲಿಸ್ ಇಲಾಖೆಯಿಂದ ಅನುಮತಿ ಪಡೆದುಕೊಂಡು ಪ್ರತಿಷ್ಠಾಪನೆ ಮಾಡಿ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಿ ಹಾಗೂ ಒಳ್ಳೆಯ ಪರಿಸರಕ್ಕೆ ಹಾನಿಯಾಗದಂತ ಗಣಪತಿಗಳನ್ನು ಕೂಡಿಸಿ ಪರಿಸರವನ್ನು ನೋಡಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನಂದಾ ವಾಲಿಕಾರ, ಗ್ರಾಮದ ಹಿರಿಯರಾದ ಅಶೋಕ ಮಿರ್ಜಿ, ರವಿ ಮಸಳಿ, ಸಚೀನ ಇಂಡಿ, ಚನ್ನಪ್ಪ ಮಿರಗಿ, ಕಾಮಣ್ಣ ಮಿರ್ಜಿ, ಧರೇಪ್ಪ ಮೇತ್ರಿ, ಶಿವಶಂಕರ ಹಿಳ್ಳಿ, ನಿಂಗಪ್ಪ ಗಬ್ಬೂರ, ಚಿದಾನಂದ ಮದರಿ, ಶರಣು ಮಸಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 