ಸಂಗನಬಸವ ಶಿವಯೋಗಿಗಳ 126ನೇ ಜನ್ಮದಿನ ಆಚರಣೆ
ಲೋಕದರ್ಶನ ವರದಿ
ವಿಜಯಪುರ, ಜು.28: ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಿಯು ಕಾಲೇಜಿನಲ್ಲಿ ಸಂಗನಬಸವ ಶಿವಯೋಗಿಗಳ 126ನೇ ಜನ್ಮದಿನವನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ವೀರೇಶ್ ಪಿ. ಅವರು ಸಂಗನಬಸವ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಆದರ್ಶಗಳು ಹಾಗೂ ಸಮಾಜಮುಖಿ ಸೇವೆಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದು, ಶಿವಯೋಗಿಗಳ ಜೀವನ ಸಂದೇಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು. ಈ ಕುರಿತು ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಬಸಯ್ಯ ಎಸ್. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.