ಬಳ್ಳಾರಿ

ಸಂಭ್ರಮದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಸಂಭ್ರಮದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಬಳ್ಳಾರಿ,ಜು.03: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಸೋಮವಾರ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. 

 ನಗರದ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಪುಟ್‌ಬಾಲ್ ಮೈದಾನದ ಸಭಾಂಗಣದಲ್ಲಿ ಏರಿ​‍್ಡಸಿದ್ದ ವೇದಿಕೆ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರೆ​‍್ಣ ಮಾಡಿದರು. 

 ಶರಣ ಸಾಹಿತ್ಯ ಪರಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಕೆ.ಬಿ.ಸಿದ್ದಲಿಂಗಪ್ಪ ಅವರು ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಕುರಿತು ವಿಶೇಷ ಉಪನ್ಯಾಸ ನೀಡಿ, ಹನ್ನೆರಡನೇ ಶತಮಾನದ ಅಸಮ ಸಮಾಜದ ಶೋಷಣೆಯನ್ನು ವಿರೋಧಿಸಿ ಹೊಸ ಸಮಾಜದ ಸ್ಥಾಪನೆಗೆ ಹೋರಾಡಿದ ಬಸವಣ್ಣ, ಅಲ್ಲಮ ಪ್ರಭು, ಅಕ್ಕಮಹಾದೇವಿ, ಮಾಚಿದೇವ ಮುಂತಾದ ಶರಣರಂತೆಯೇ ಅಪ್ಪಣ್ಣನವರೂ ಪೂಜ್ಯನೀಯರಾಗಿದ್ದರು ಎಂದು ಹೇಳಿದರು. 

 ಅಪ್ಪಣ್ಣನವರು 1134 ರಲ್ಲಿ ಜನಿಸಿದವರು. ಅವರ ಜನ್ಮಸ್ಥಳ ಬಸವನಬಾಗೇವಾಡಿ ಸಮೀಪದ ಮಸಬಿನಾಳ ಎಂಬ ಗ್ರಾಮ. ತಂದೆ ಚೆನ್ನವೀರ​‍್ಪ, ತಾಯಿ ದೇವಕಮ್ಮ. ಅವರು ‘ಬಸವಪ್ರಿಯ ಕೂಡಲ ಚೆನ್ನಬಸವಣ್ಣ’ ಎಂಬ ಅಂಕಿತನಾಮದಲ್ಲಿ ಅಂದಾಜು 243 ವಚನಗಳನ್ನು ಬರೆದಿದ್ದಾರೆ. ಅವರ ಕಾಯಕನಿಷ್ಠೆ ಭಕ್ತಿ, ವೈರಾಗ್ಯ ಮತ್ತು ದಾಸೋಹಗಳು ದಾರೀದೀಪಗಳಾಗಿವೆ ಎಂದು ತಿಳಿಸಿದರು. 

 ಅಪ್ಪಣ್ಣನವರು ಅನುಭವ ಮಂಟಪದ ಕಾರ್ಯದರ್ಶಿಯಾಗಿ ಮತ್ತು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾಯಕ ನಿರ್ವಹಿಸಿದ್ದರು. ಅವರ ಬಹುತೇಕ ವಚನಗಳು ಬೆಡಗಿನ ವಚನಗಳಾಗಿವೆ. ಇವರು ವಚನಗಳಲ್ಲಿ ಶರಣರಿಗಿರಬೇಕಾದ ಕಾಯಕನಿಷ್ಠೆ, ದಾಸೋಹ, ವೈರಾಗ್ಯ, ಭಕ್ತಿ, ಆಚಾರ-ವಿಚಾರಗಳನ್ನು ವಿಡಂಬಿಸಿ ಅಜ್ಞಾನಿಗಳನ್ನು ಸುಜ್ಞಾನಿಗಳನ್ನಾಗಿ ಮಾಡಲು ಯತ್ನಿಸಿದ್ದರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಂಗಮ ಹೊಸಳ್ಳಿಯ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. 

 ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಜಾನಕಿ, ಹಿರಿಯ ಸಾಹಿತಿ ಮತ್ತು ಡಾ.ಬಾಬು ಜಗಜೀವನರಾಮ್ ರಾಜ್ಯ ಪ್ರಶಸ್ತಿ ಪುರಸ್ಕೃತೆ ಎಂ.ಡಿ.ವೆಂಕಮ್ಮ, ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಟಿ.ಹೆಚ್‌.ಎಂ.ಬಸವರಾಜ್, ಕನ್ನಡ ಉಪನ್ಯಾಸಕ ಶಿವಾನಂದ ಹೊಂಬಳ್ಕರ್, ರಂಗಭೂಮಿ ಕಲಾವಿದೆ ವೀಣಾ ಕುಮಾರಿ, ಲತಾಶ್ರೀ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್‌.ಆರ್‌.ಸುರೇಶ್ ಬಾಬು, ಹಡಪದ ಸಮಾಜದ ಜಿಲ್ಲಾಧ್ಯಕ್ಷ ರುದ್ರ​‍್ಪ ಎಮ್ಮಿಗನೂರು, ಜಿಲ್ಲಾ ಗೌರವಾಧ್ಯಕ್ಷ ಕೊಟ್ರ​‍್ಪ, ಬಳ್ಳಾರಿ ತಾಲೂಕು ಘಟಕದ ಸದಾಶಿವ, ಕಂಪ್ಲಿ ತಾಲೂಕು ಘಟಕದ ಲಿಂಗೇಶ್, ಕುರುಗೋಡು ತಾಲೂಕು ಘಟಕದ ಮಂಜುನಾಥ, ಸಂಡೂರು ತಾಲೂಕಿನ ಬಸವರಾಜ ಸೇರಿದಂತೆ ಸಮುದಾಯದ ಭಾಂದವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. 

ಭವ್ಯ ಮೆರವಣಿಗೆ 

ಗಮನ ಸೆಳೆದ ವಿವಿಧ ಕಲಾತಂಡಗಳ ಪ್ರದರ್ಶನ 

ಬಳ್ಳಾರಿ,ಜು.03: ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಬೆಳಗ್ಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು. 

 ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಡಿ.ತ್ರಿವೇಣಿ ಅವರು ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆೆ ಮಾಡಿ, ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು. ಭವ್ಯ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಹಾಗೂ ಕಳಸ-ಕುಂಭ ಹೊತ್ತ ಮಹಿಳೆಯರು ಗಮನ ಸೆಳೆದರು. 

 ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯೋತ್ಸವದ ಭವ್ಯ ಮೆರವಣಿಗೆಯು ಹೆಚ್‌.ಆರ್‌.ಗವಿಯಪ್ಪ ವೃತ್ತದಿಂದ ಆರಂಭವಾಗಿ ರೈಲ್ವೆ ನಿಲ್ದಾಣದ ಮಾರ್ಗದಿಂದ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದವರೆಗೆ ನಡೆಯಿತು. 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್‌.ಆರ್‌.ಸುರೇಶ್ ಬಾಬು ಸೇರಿದಂತೆ ಹಡಪದ ಸಮುದಾಯದ ಮುಖಂಡರು ಇದ್ದರು. 

-------- 

ಜು.13 ರಂದು ಪಿಂಚಣಿ ಅದಾಲತ್  

ಬಳ್ಳಾರಿ,ಜು.03: 

ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸಲು ಜುಲೈ 13 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಬಳ್ಳಾರಿ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. 

ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ಬಳ್ಳಾರಿಯ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ಇವರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ತಮ್ಮ ಪಿ.ಪಿ.ಒ ಸಂಖ್ಯೆ ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಕುಂದು ಕೊರತೆಯ ಸ್ವರೂಪ ಇತ್ಯಾದಿಗಳನ್ನು ಬರೆದು ಪತ್ರ ಮೂಲಕ ಜುಲೈ 10 ರೊಳಗೆ ಕಳುಹಿಸಬಹುದು. ಪತ್ರ, ಲಕೋಟೆಯ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. 

ಹೆಚ್ಚಿನ ಮಾಹಿತಿಗಾಗಿ ದೂ.08392-2263047 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ