ಸ.ಮಾ.ಪ್ರಾ.ಕ.ಹೆ. ಮ.ಶಾಲೆಯಲ್ಲಿ ಭಕ್ತ ಕನಕದಾಸರ ಜಯಂತಿ ಆಚರಣೆ
ಲಕ್ಷ್ಮೇಶ್ವರ 27: ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಇಂದು ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಣೆ ಮಾಡಿ ಮಾತನಾಡಿದ ಶಾಲೆಯ ಪ್ರಧಾನ ಗುರುಗಳಾದ ಬಸವರಾಜ ಕುಂಬಾರ ಅವರು ಕನಕದಾಸರು ತಮ್ಮ ಕೀರ್ತನೆಗಳು ಮತ್ತು ಸಾಹಿತ್ಯದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದರು. ಜಾತಿ-ಮತಗಳ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಸಂದೇಶವನ್ನು ಸಾರಿದ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು," ಎಂದು ಕರೆ ನೀಡಿದರು.ಶಾಲೆಯ ಶಿಕ್ಷಕಿ ಎಚ.ಡಿ. ನಿಂಗರೆಡ್ಡಿ ಅವರು ಮಾತನಾಡಿ, ಕನಕದಾಸರ ಜೀವನ ಚರಿತ್ರೆ ಹಾಗೂ ದಾಸ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕನಕದಾಸರ ಕೀರ್ತನೆಗಳ ಗಾಯನ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು ಈ ಸಮಯದಲ್ಲಿ ಶಾಲೆಯ ಶಿಕ್ಷಕರಾದ ಆರ್ ಎಮ್ ಶಿರಹಟ್ಟಿ ಎಲ್ ಎ ಬಣಕಾರ ಆರ್ ಕೆ ಉಪನಾಳ ಕೀರ್ತನ ಅಚಲಕರ ಶಿವರಾಜ ಸಜ್ಜನ ಶಾಲೆಯ ವಿದ್ಯಾರ್ಥಿಗಳು ಇದ್ದರು