ವನಮಹೋತ್ಸವ ಆಚರಣೆ
ಕುಕನೂರು: ಪ್ರತಿಷ್ಠಿತ ವಿದ್ಯಾನಂದ ಗುರುಕುಲ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಶನಿವಾರ ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಕಾರ್ಯದರ್ಶಿ ಜಿ.ವಿ.ಜಹಗೀರದಾರ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿನಲ್ಲಿ ಇಂದು ಆಗುತ್ತಿರುವ ಹವಾಮಾನ ವೈಪರಿತ್ಯಕ್ಕೆ ಹಾಗೂ ಜಾಗತೀಕ ತಾಪಮಾನಕ್ಕೆ ಪರಿಸರ ನಾಶವೇ ಕಾರಣವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆ ಮಾಡಬೇಕಾದ ಅಗತ್ಯ ಇದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಉಪನ್ಯಾಸಕ ಹನುಮಂತರಾವ್, ಪ್ರಭಾರಿ ಪ್ರಾಚಾರ್ಯ ನಜೀರ್ಅಹ್ಮದ್ ತಳಕಲ್, ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯ ಸೋಮಶೇಖರ್ ನಿಲೋಗಲ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥ ಶಿವಕುಮಾರ ಹೆಳವರ, ಉಪನ್ಯಾಸಕರಾದ ಆರ್.ಕೆ.ಪಾಟೀಲ, ರಾಜು ಪೂಜಾರ, ಗಿರಿಧರ ನಿಲೋಗಲ್, ಬಸವರಾಜ ಬಂಗಿ, ಮೃತ್ಯುಂಜಯ ಕೆಂಭಾವಿಮಠ ಸೇರಿದಂತೆ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸರ್ವ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಆವರಣದಲ್ಲಿ ಸುಮಾರು 100ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು