ಬೆಳಗಾವಿ

ಬಡಿಗವಾಡ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ

ಬಡಿಗವಾಡ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ


ಗುರ್ಲಾಪೂರ 02: ಸಮೀಪದ ಬಡಿಗವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ಆರ್‌.ಎಸ್‌. ಗಡ್ಡೀಕಾರ್ ಮಾತನಾಡಿ, ಸತ್ಯ, ಶಾಂತಿ ಮತ್ತು ಅಹಿಂಸೆಯನ್ನು ಜೀವನದ ಮೂಲಮಂತ್ರವನ್ನಾಗಿ ಮಾಡಿಕೊಂಡು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ನಾಯಕರಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ಶ್ರೀಮತಿ ಎಂ.ಎಲ್‌. ಶೀಂಧ್ರಿ, ಶ್ರೀ ಆನಂದಕುಮಾರ ಬಿ.ಆರ್‌., ಶ್ರೀಮತಿ ದೀಪಾ ಕೊಂಕಣಿ, ಶ್ರೀಮತಿ ಲಕ್ಷ್ಮೀ ರಾಣವಗೋಳ, ಶ್ರೀ ಸಿದ್ದಪ್ಪ ಗಂಗಾಯಿ, ಶ್ರೀಮತಿ ರೇಖಾ ಗಂಗಾಯಿ ಹಾಗೂ ಶ್ರೀಮತಿ ಕಾವೇರಿ ವಗ್ಗರ ಸೇರಿದಂತೆ ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.  

ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಗಾಂಧೀಜಿ ಮತ್ತು ಶಾಸ್ತ್ರಿ ಅವರ ಆದರ್ಶಗಳನ್ನು ಸ್ಮರಿಸಿ, ಅವರ ಸಂದೇಶಗಳನ್ನು ಜೀವನದಲ್ಲಿ ಪಾಲಿಸುವ ಸಂಕಲ್ಪ ಮಾಡಿದರು. 


ಸುದ್ದಿ ಓದಿ