ಕಾರವಾರ ಜಿಲ್ಲಾ ಪಂಚಾಯಿತಿಯಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ
ಲೋಕದರ್ಶನ ವರದಿ
ಕಾರವಾರ, ಅ. 2 : ಕಾರವಾರ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದೀಲೀಪ್ ಶಶಿ ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಸ್ವಚ್ಛತೆಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಬಳಿಕ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮದಾನದಲ್ಲಿ ಭಾಗವಹಿಸಿ ಸ್ವಚ್ಛತೆಯ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕ್ಷ, ಯೋಜನಾ ನಿರ್ದೇಶಕ ಕರೀಂ ಅಸದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ ಸೇರಿದಂತೆ ಜಿಲ್ಲಾ ಪಂಚಾಯಿತಿಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.