ತಾಳಿಕೋಟಿ

ಎಸ್‌.ಎಸ್‌.ವಿದ್ಯಾಸಂಸ್ಥೆಯಲ್ಲಿ ಕನಕದಾಸರ ಜಯಂತಿ ಆಚರಣೆ

ಎಸ್‌.ಎಸ್‌.ವಿದ್ಯಾಸಂಸ್ಥೆಯಲ್ಲಿ ಕನಕದಾಸರ ಜಯಂತಿ ಆಚರಣೆ

 ತಾಳಿಕೋಟಿ 29: ಪಟ್ಟಣ ಎಸ್ ಎಸ್ ವಿದ್ಯಾ ಸಂಸ್ಥೆಯಲ್ಲಿ ದಾಸ ಶ್ರೇಷ್ಠರಾದ ಕನಕದಾಸರ ಜಯಂತಿಯನ್ನು ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್‌.ಎಸ್‌.ಪಾಟೀಲರು ಪೂಜೆ ಸಲ್ಲಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಇಂತಹ ಮಹನಿಯರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಕೇವಲ ಪೂಜೆಸಿದರೆ ಮಾತ್ರ ಸಾಲದು ಎಂದು ಹೇಳಿದರು. ಪ್ರೌಢಶಾಲೆಯ ಹಿರಿಯ ಶಿಕ್ಷಕ ಸಾಹಿತಿಗಳಾದ ಎಸ್‌.ವಿ.ಜಾಮಗೊಂಡಿಯವರು ಕನಕದಾಸರ ಇತಿಹಾಸ ಹೇಳಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಎಸ್‌.ಬಿ.ಮಂಗ್ಯಾಳ .ಐ.ಟಿ.ಐ.ಕಾಲೇಜಿನ ಪ್ರಾಚಾರ್ಯ ಎಸ್‌.ಬಿ.ಸಾಸನೂರ ಪ್ರೌಢಶಾಲೆಯ ಮುಖ್ಯಸ್ಥ ಅಶೋಕ.ಕಟ್ಟಿ .ಆಂಗ್ಲ ಮಾದ್ಯಮ ಶಾಲೆಯ ಉಮೇಶ.ಜಿ.ಅಬ್ಬಿಗೇರಿ. ಬಿ.ಐ.ಹಿರೇಹೊಳಿ. ಎಸ್‌.ಎಸ್‌.ವಿದ್ಯಾಸಂಸ್ಥೆಯ ಸಮಸ್ತ ಸಿಬ್ಬಂಧಿಗಳು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು. 


ಸುದ್ದಿ ಓದಿ