ತಾಳಿಕೋಟಿ

ಸರ್ವಜ್ಞ ವಿದ್ಯಾಪೀಠದಲ್ಲಿ ಕನಕದಾಸ ಜಯಂತಿ ಆಚರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ಕನಕದಾಸ ಜಯಂತಿ ಆಚರಣೆ


               ತಾಳಿಕೋಟಿ 27 : ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಹರಿದಾಸ ಸಾಹಿತ್ಯ ಪರಂಪರೆಯ ಪ್ರಮುಖ ಸಂತ, ಕವಿ, ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರಾಗಿ ಕನ್ನಡಿಗರಿಗೆ ಮನಸ್ಸನಲ್ಲಿ ಶಾಶ್ವತ ಸ್ಥಾನ ಪಡೆದ ಭಕ್ತ ಕನಕದಾಸರ ಜಯಂತೋತ್ಸವವನ್ನು ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

             ಈ ಸಂದರ್ಭದಲ್ಲಿ ಸಮಾಜ ವಿಜ್ಞಾನ ಶಿಕ್ಷಕ ರಾಜು ಜವಳಗೇರಿ ಅವರು ಮಾತನಾಡಿ ಕುಲಕುಲವೆಂದು ಹೊಡೆದಾಡದಿರಿ ಎಂಬ ಅವರ ಪ್ರಸಿದ್ಧ ಚಿಂತನೆ ಇಂದಿಗೂ ಸಾಮಾಜಿಕ ವಾಸ್ತವದ ಮೇಲೆ ಪ್ರಶ್ನೆ ಎತ್ತುತ್ತದೆ ಜಾತಿ ಹೆಸರಿನಲ್ಲಿ ಮನುಷ್ಯರನ್ನು ವಿಭಜಿಸಿರುವ ಸಮಾಜ ನಿಜವಾದ ಪ್ರಗತಿಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ತಿಳಿಸಿ ಉಡುಪಿಯ  ಕೃಷ್ಣ ದೇವಾಲಯದೊಂದಿಗೆ ಸಂಬಂಧಿಸಿದೆ ಕನಕನ ಕಿಂಡಿ ಪ್ರಸಂಗವು ಅವರ ಜೀವನದ ಸಾಮಾಜಿಕ ಸಂದೇಶವನ್ನು ಜನಮಾನಿಸದಲ್ಲಿ ಇನ್ನಷ್ಟು ಗಾಢವಾಗಿ ನೆಲಗೊಳಿಸಿದೆ.

             ನಾವು ಕನಕದಾಸರ ಜಯಂತಿಯನ್ನು ಆಚರಿಸುವಾಗ ಕೇವಲ ಅವರ ಭಾವಚಿತ್ರಕ್ಕೆ ಮಾಲಾರೆ​‍್ಣ ಮಾಡಿ ಕೀರ್ತನೆಗಳನ್ನು ಹಾಡಿ ಮೂಡಿಸುವುದರಿಂದ ಅವರ ಆಶಯ ನೆರವೇರುವುದಿಲ್ಲ ಅವರ ಆಚಾರ ವಿಚಾರ ಅವರ ಸಾಮಾಜಿಕ ಸಂದೇಶಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

                ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಬ ಮಂಗಳೂರ, ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಗನಗೌಡ ಅಸ್ಕಿ, ಮುಖ್ಯಗುರುಗಳಾದ ಸಂತೋಷ ಪವಾರ, ದೈಹಿಕ ಶಿಕ್ಷಕರಾದ ಬಸವರಾಜ ಚಳ್ಳಗಿ, ಶಾಂತಗೌಡ ಬಿರಾದಾರ, ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ