ವಿಜಯಪುರ

ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

ಲೋಕದರ್ಶನ ವರದಿ 


ವಿಜಯಪುರ 27 : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಕನಕದಾಸ ಅಧ್ಯಯನ ಪೀಠದ ವತಿಯಿಂದ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಂ. ಪಿ. ಬಳಿಗಾರ್ ಕನಕ ಕೀರ್ತನೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಪ್ರೊ. ಶಾಂತಾದೇವಿ ಟಿ, ಪ್ರೊ. ಶ್ರೀನಿವಾಸ್, ಪ್ರೊ. ಲಕ್ಷ್ಮೀದೇವಿ, ಡಾ. ಸಂಜೀವ್ ಕುಮಾರ್ ಗಿರಿ, ಡಾ. ನಟರಾಜ್ ದುರ್ಗನ್ನವರ್, ಡಾ. ಅಮರನಾಥ್ ಪ್ರಜಾಪತಿ, ವಿವಿಯ ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕನಕದಾಸ ಅಧ್ಯಯನ ಪೀಠದ ಸಂಯೋಜಕ ಡಾ. ಸಂದೀಪ್ ಸ್ವಾಗತಿಸಿ ವಂದಿಸಿದರು. 


ಸುದ್ದಿ ಓದಿ