ಬಳ್ಳಾರಿ

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ವಿಜಯನಗರ (ಹೊಸಪೇಟೆ) 23: ವಿಜಯನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕೊಟ್ಟೂರು ಸ್ವಾಮಿ ಮಠದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಶನಿವಾರ ಸರಳವಾಗಿ ಆಚರಿಸಲಾಯಿತು. 


ಜಿಲ್ಲಾಧಿಕಾರಿ ಅನಿರುದ್ದ ಶ್ರವಣ್ ಅವರು ಜ್ಯೋತಿ ಬೆಳಗಿಸಿ ವೀರಮಾತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿದರು, ನಂತರ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ನೆರೆದಿದ್ದ ಎಲ್ಲರಿಗೂ ಜಯಂತ್ಯೋತ್ಸವದ ಶುಭಾಶಯ ತಿಳಿಸಿದರು. 

ನಂತರ ಮಾತನಾಡಿದ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ದೇಶಕ್ಕಾಗಿ ಹೋರಾಡಿದ ವೀರಮಾತೆ ರಾಣಿ ಚೆನ್ನಮ್ಮ. ಬ್ರಿಟೀಷರಿಗೆ ಸೋಲಿನ ರುಚಿ ತೋರಿಸಿದ ಅವರ ಹೋರಾಟ ಅಪಾರವಾದದ್ದು. ಅವರ ಆದರ್ಶಗಳನ್ನು ಇಂದಿನ ಯುವಪೀಳಿಗೆ ಅಳವಡಿಸಿಕೊಳ್ಳಬೇಕು ಎಂದರು. 

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರರಾದ ಸಿದ್ದರಾಮೇಶ್ವರ್, ತಹಸೀಲ್ದಾರರಾದ ಹೆಚ್‌.ವಿಶ್ವನಾಥ್, ನಗರಸಭೆಯ ಪೌರಯುಕ್ತರರಾದ ಮನ್ಸೂರು ಅಲಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಜೀರಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುನಂದಾ, ವಿಜಯನಗರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ.ಎಸ್‌.ಶಿವಾನಂದ ಹಾಗೂ ಸಮಾಜದ ಮುಖಂಡರುಗಳು ಹಾಗೂ ಇತರರು ಉಪಸ್ಥಿತರಿದ್ದರು.. 


ಸುದ್ದಿ ಓದಿ