ತಾಳಿಕೋಟಿ

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

ತಾಳಿಕೋಟಿ 24:  ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂ ಏ ಎಸ್ ಮತ್ತು ಎನ್ ಎಸ್ ಎಸ್ ಘಟಕದ ವತಿಯಿಂದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತ್ಯೋತ್ಸವವನ್ನು ಶುಕ್ರವಾರ ಭಕ್ತಿಭಾವದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಆರ್‌. ಎಂ. ಬಂಟನೂರ ಹಾಗೂ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ಪ್ರಶಿಕ್ಷಣಾರ್ಥಿಗಳು ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಸಾಹಸ, ದೇಶಪ್ರೇಮ ಹಾಗೂ ಬ್ರಿಟಿಷರ ವಿರುದ್ಧದ ಹೋರಾಟದ ಕುರಿತು ಸ್ಮರಿಸಲಾಯಿತು. ಸ್ವಾತಂತ್ರ್ಯ, ಸ್ವಾಭಿಮಾನ ಮತ್ತು ನಾಡಿನ ಗೌರವವನ್ನು ಕಾಪಾಡಲು ಅವರು ತೋರಿದ ಶೌರ್ಯವು ಇಂದಿನ ಯುವಜನತೆಗೆ, ವಿಶೇಷವಾಗಿ ಭಾವಿ ಶಿಕ್ಷಕರಿಗೆ, ಪ್ರೇರಣಾದಾಯಕವಾಗಿದೆ ಎಂದು ಅಭಿಪ್ರಾಯ ಹಂಚಿಕೊಳ್ಳಲಾಯಿತು. ಕಾರ್ಯಕ್ರಮವು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 


ಸುದ್ದಿ ಓದಿ