ಧಾರವಾಡ - ಹುಬ್ಬಳ್ಳಿ

ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಲೋಕದರ್ಶನ ವರದಿ 

ಹುಬ್ಬಳ್ಳಿ 22: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳಾ ವೀರರಾಣಿ ಕಿತ್ತೂರು ಚನ್ನಮ್ಮ, ಮಹಾನ್ದೇಶಪ್ರೇಮಿ ಹಾಗೂ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ನಿಮಿತ್ತ ಅವರ ಪ್ರತಿಮೆಗಳಿಗೆ ಮಾಲಾರೆ​‍್ಣ ಮಾಡಿ ಗೌರವ ಸಲ್ಲಿಸಲಾಯಿತು.  ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.  

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ಸೋಹನ್ ಸುರೇಶ ಹೊರಕೇರಿ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯಮದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷರು, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರು,

ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ ನಿವೃತ್ತ ಪ್ರಾಚಾರ್ಯ ಪ್ರೊ. ಎಸ್‌.ಎಂ. ಸಾತಾರ, ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡಶೆಟ್ಟರ ಸೇರಿದಂತೆ ಹಲವರು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಅವರ ಸಾಹಸ, ಹೋರಾಟ ಹಾಗೂ ದೇಶಪ್ರೇಮದ ಗುಣಗಳನ್ನು ಸ್ಮರಿಸಿ ಗೌರವಪೂರ್ವಕ ನಮನ ಸಲ್ಲಿಸಲಾಯಿತು. 


ಸುದ್ದಿ ಓದಿ