ವಿಜಯಪುರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಲೋಕದರ್ಶನ ವರದಿ
ವಿಜಯಪುರ 26: ಬಿಜಾಪುರ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ವಿವಿಧ ಶಾಲಾ-ಕಾಲೇಜುಗಳ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಖಜಾಂಚಿ ಶ್ರೀ ವಿನೋದ್ ಎಂ. ಖೇಡ್ ಅವರು ವಹಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿಯವರ ಜೀವನ, ಆದರ್ಶಗಳು ಹಾಗೂ ಅವರ ಮಹತ್ವದಗಳ ಕುರಿತು, ತತ್ವಾದರ್ಶಗಳು ಸಮಾಜಕ್ಕೆ ಸದಾ ಮಾರ್ಗದರ್ಶಿಯಾಗಿವೆ ಎಂದು ತಿಳಿಸಿದರು. ಇದೇ ವೇಳೆ ಮಹರ್ಷಿ ವಾಲ್ಮೀಕಿಯವರ ಜೀವನ, ಇತಿಹಾಸ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಎಸ್.ಕೆ.ವಿ.ಎಂ.ಎಸ್. ಕಾಲೇಜಿನ ಪ್ರಾಚಾರ್ಯರಾದ ಎಂ.ಡಿ. ಹೆಬ್ಬಿ, ಐಟಿಐ ಕಾಲೇಜಿನ ಪ್ರಾಚಾರ್ಯರಾದ ಡಿ.ಎನ್. ಕೋಳಿ ಹಾಗೂ ಎಂ.ಎ.ಕೆ. ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ. ವಿಜಯಲಕ್ಷ್ಮಿ ಹಿಪ್ಪರಗಿ, ಎಸ್.ಐ.ಬಿರಾದಾರ, ಚಂದ್ರಶೇಖರ ಹಂಚನಾಳ, ಸಂದೀಪ ಮುರಗೊಂಡ, ಮಹೇಶ ಇನಾಂದಾರ, ಭೀಮನಗೌಡ ಬಮ್ಮನಹಳ್ಳಿ, ಸುಭಾಸ ರಜಪೂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.