ಬೈಲಹೊಂಗಲ

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಬೈಲಹೊಂಗಲ, ಜು. 29: ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ನಗರದ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಅವರ ಕಚೇರಿಯಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.  ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಬಿಜೆಪಿ ಮಂಡಲ ಅಧ್ಯಕ್ಷ ಸುಭಾಷ್ ತುರಮರಿ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಮುಖಂಡರಾದ ಶಿವಾನಂದ ಬಡ್ಡಿಮನಿ, ಯುವ ಮೋರ್ಚಾ ಉಪಾಧ್ಯಕ್ಷ ಸದಾಶಿವ ಪಾಟೀಲ, ರಾಘವೇಂದ್ರ ಕುಮಚಿ, ಬಸವರಾಜ ಗುರುವಣ್ಣವರ, ಪ್ರವೀಣ ಶಿಂಗಾರಿ, ಶಿವಾನಂದ ಕುರಬೆಟ, ರವಿ ಯಾಸಣ್ಣವರ, ಆನಂದ ಆಣಿಗೋಳ, ಮಲ್ಲಿಕಾರ್ಜುನ ಮೆಟಗುಡ್ಡ, ನಾಗರಾಜ ಸಾಲಿಮಠ, ವಾಸಿಂ ಹರಿಹರಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 


ಸುದ್ದಿ ಓದಿ