ಧಾರವಾಡ - ಹುಬ್ಬಳ್ಳಿ

ಸಿದ್ಧಗಂಗಾ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ 63ನೇ ಜನ್ಮದಿನ ಆಚರಣೆ

ಸಿದ್ಧಗಂಗಾ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ 63ನೇ ಜನ್ಮದಿನ ಆಚರಣೆ

ಲೋಕದರ್ಶನ ವರದಿ 

ಹುಬ್ಬಳ್ಳಿ 23: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾನಗರದ ಬನಕಾಶಿ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಶ್ರೀ ಮ.ನಿ.ಪ್ರ. ಸ್ವ. ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ 63ನೇ ಜನ್ಮದಿನವನ್ನು ಭಕ್ತಿಭಾವದಿಂದ ಆಚರಿಸಲಾಯಿತು.  

ಈ ಸಂದರ್ಭದಲ್ಲಿ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಮಾಲಾರೆ​‍್ಣ ಮಾಡಿ ಶ್ರದ್ಧಾ-ಭಕ್ತಿಯ ನಮನ ಸಲ್ಲಿಸಲಾಯಿತು. ವಕ್ತಾರರು ಮಾತನಾಡಿ, ಸಿದ್ಧಗಂಗಾ ಮಠವು ಸಮಾಜದಲ್ಲಿ ಪ್ರೀತಿ, ವಿಶ್ವಾಸ ಹಾಗೂ ಆತ್ಮವಿಶ್ವಾಸ ಬೆಳೆಸುವ ಕಾರ್ಯ ಮಾಡುತ್ತಿದ್ದು, ಕಾಯಕ, ದಾಸೋಹ ಮತ್ತು ಶಿವಯೋಗದ ತತ್ವಗಳನ್ನು ಶ್ರೀಗಳು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.  

ಕಾರ್ಯಕ್ರಮದಲ್ಲಿ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ನಿವೃತ್ತ ಗ್ರಂಥಪಾಲಕ ಡಾ. ಬಿ.ಎಸ್‌. ಮಾಳವಾಡ, ಸುರೇಶ ಲಿಂಬಿಕಾಯಿ, ಚನ್ನಬಸಪ್ಪ ಧಾರವಾಡಶೆಟ್ಟರ್, ಚನ್ನಬಸಯ್ಯ ಹಿರೇಮಠ, ಅಲ್ಲಾಬಕ್ಷ ನದಾಫ್ ಸೇರಿದಂತೆ ಶ್ರೀಗಳ ಭಕ್ತರು ಭಾಗವಹಿಸಿದ್ದರು. 


ಸುದ್ದಿ ಓದಿ