ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ಭಗೀರಥ ಜಯಂತ್ಯೋತ್ಸವ : ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ದೊಡ್ಡದು: ಮೇಯರ್ ಪಿ.ಗಾದೆಪ್ಪ
Celebration of Sri Bhagirath Jayantho in Bellary: Role of education is great in the development of s
ಲೋಕದರ್ಶನ ವರದಿ
ಬಳ್ಳಾರಿ 23: ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ದೊಡ್ಡದು. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸಮಾಜದ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಧ್ಯೇಯವಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ರಾಜ್ಯ ಸರ್ಕಾರವು ಸುಮಾರು 25ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ಸಮುದಾಯಗಳ ಜಯಂತಿಗಳನ್ನು ಆಚರಿಸುವ ಮೂಲಕ ಆಯಾ ಸಮಾಜದ ಮಹನೀಯರು ನೀಡಿದ ತಪಸ್ಸು, ತ್ಯಾಗ ಮತ್ತು ಮಾರ್ಗದರ್ಶನವನ್ನು ಇಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ, ನಗರದ ಸಂಗನಕಲ್ಲಿನ ರಸ್ತೆಯೊಂದರ ವೃತ್ತವೊಂದಕ್ಕೆ ಭಗೀರಥ ವೃತ್ತ ಎಂದು ನಾಮಕರಣ ಮಾಡಲು ಮಾಡಲು ಸರ್ಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಈಗಾಗಲೇ ಪೊಲೀಸ್ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ದೊರೆತಿದ್ದು, ಮುಂದಿನ ಜಯಂತಿಯೊಳಗೆ ಅಧಿಕೃತವಾಗಿ ಉದ್ಘಾಟನೆ ಮಾಡಿ, ಅಲ್ಲಿಂದಲೇ ಜಯಂತಿ ಮೆರವಣಿಗೆ ಮಾಡೋಣ ಎಂದು ಭರವಸೆ ನೀಡಿದರು.
ಸಣ್ಣ ಪುಟ್ಟ ಸಮುದಾಯಗಳು ಒಂದಾಗಿ ಬಾಳಬೇಕು. ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಸಂಘಟಿತ ಹೋರಾಟ ಮತ್ತು ಕೇಳುವ ಧಾಟಿ ಮುಖ್ಯ. ನಾವು ಕೇಳುವ ವಿಧಾನ ಸರಿಯಾಗಿದ್ದರೆ ಸರ್ಕಾರ ಖಂಡಿತ ಸ್ಪಂದಿಸುತ್ತದೆ ಎಂದು ತಮ್ಮ ಆಶಯ ವ್ಯಕ್ತಪಡಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಉಪ್ಪಾರ ಸಮುದಾಯದವರು ಇತರರಿಗಾಗಿ ದುಡಿಯುವುದರಲ್ಲಿ ಮತ್ತು ಇತರರ ಕೆಲಸಗಳನ್ನು ಮಾಡಿಕೊಡುವುದರಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಆದರೆ ಸ್ವಂತ ಸಮುದಾಯದ ರಾಜಕೀಯ ಬೆಳವಣಿಗೆಗೆ ಶ್ರಮಿಸುತ್ತಿಲ್ಲ. ಈ ಧೋರಣೆ ಬದಲಾಗಬೇಕಿದೆ ಮತ್ತು ನಮ್ಮ ಹಕ್ಕುಗಳಿಗಾಗಿ ನಾವು ಒಂದಾಗಬೇಕಿದೆ ಎಂಬ ಹೇಳಿದರು.
ಐತಿಹಾಸಿಕ ಕೊಡುಗೆ ಮತ್ತು ಶ್ರಮಿಕ ಸಂಸ್ಕೃತಿ ಉಪ್ಪಾರ ಮತ್ತು ಗಂಗಾಮತಸ್ಥ ಸಮುದಾಯಗಳ ದೇಶಪ್ರೇಮ ಹಾಗೂ ಶ್ರಮಿಕ ಗುಣವನ್ನು ಅಳವಡಿಸಿಕೊಂಡವರು ಎಂದು ಒತ್ತಿ ಹೇಳಿದ ಅವರು, ಮುಂಬರುವ ದಿನಗಳಲ್ಲಿ ಎಲ್ಲಾ ಹಿಂದುಳಿದ ಮತ್ತು ಶೋಷಿತ ವರ್ಗಗಳು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಒಗ್ಗೂಡಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಂಗನಕಲ್ಲಿನ ನಿವೃತ ಶಿಕ್ಷಕ ಕೆ.ಬಿ.ಸಿದ್ದಲಿಂಗಪ್ಪ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಮಹರ್ಷಿ ಭಗೀರಥರು ತೀವ್ರ ತಪಸ್ಸಿನ ಮೂಲಕ ಸ್ವರ್ಗದಲ್ಲಿದ್ದ ಗಂಗಾನದಿಯನ್ನು ಭೂಮಿಗೆ ತಂದ ಪೌರಾಣಿಕ ರಾಜ. ಛಲ, ಪರಿಶ್ರಮ ಮತ್ತು ಜಲ ಸಂರಕ್ಷಣೆಯ ಸಂಕೇತವಾಗಿ ಇವರನ್ನು ಸ್ಮರಿಸಲಾಗುತ್ತದೆ. ಅಸಾಧ್ಯವಾದುದನ್ನು ಸಾಧಿಸುವ ವ್ಯಕ್ತಿತ್ವಕ್ಕೆ ಭಗೀರಥರು ಉದಾಹರಣೆಯಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಮುಖಂಡರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು. ಕಂಪ್ಲಿಯ ಶೈಲಾ ದೇವರಮನಿ ತಂಡ ಭಕ್ತಿ ಸಂಗೀತ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಸಂವಿಧಾನ ಪೀಠಿಕೆ ಬೋಧಿಸಲಾಯಿತು.
*ಸಂಭ್ರಮದ ಮೆರವಣಿಗೆ:*
ಶ್ರೀ ಭಗೀರಥ ಜಯಂತಿ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆಯು ನಗರದಲ್ಲಿ ಸಂಭ್ರಮದಿಂದ ಜರುಗಿತು. ಮೆರವಣಿಗೆಗೆ ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ಚಾಲನೆ ನೀಡಿದರು.
ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನೊಳಗೊಂಡ ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ರೈಲ್ವೇ ನಿಲ್ದಾಣ ರಸ್ತೆ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ದವರೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರ ಕಚೇರಿಯ ತಹಶೀಲ್ದಾರ್ ಶಾಷಾವಲಿ, ಗ್ರೇಡ್-2 ತಹಶೀಲ್ದಾರ್ ವಿನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ಮಗನಿಗಾಗಿ 2ನೇ ದಿನವು ಮುಂದುವರಿದ ಶೋಧ ಕಾರ್ಯ: ಕುಟುಂಬಕ್ಕಿದ್ದ ಒಬ್ಬನೆ ಮಗು ನೀರುಪಾಲು
ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು 