ಎಲಬುರ್ಗ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಲಬುರ್ಗಾ 7: ತಾಲೂಕಿನ ಹುಲೇಗುಡ್ಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ವಾಲ್ಮೀಕಿ ಸಮಾಜದ ತಾಲೂಕಾಧ್ಯಕ್ಷ ಮಾನಪ್ಪ ಪೂಜಾರ್ ಚಾಲನೆ ನೀಡಿದರು.

ಬಳಿಕ ಮಾತನಾಡಿ, ಆದಿ ಕವಿ ಮಹರ್ಷಿ ವಾಲ್ಮೀಕಿ ಅವರು ನಾಡಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಸಮಾಜದ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಗುಣಾತ್ಮಕವಾಗಿ ಶಿಕ್ಷಣ ಕೊಡಿಸಿ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕಿದೆ ಎಂದರು.

ಸರಕಾರದಿಂದ ದೊರೆಯುವ ಯೋಜನೆಗಳನ್ನು ಸಕಾಲಕ್ಕೆ ಪಡೆಯಬೇಕು. ಸಮಾಜದ ಬಾಂಧವರು ಏಳ್ಗೆಗೆ ಶ್ರಮಿಸಲು ಒಗ್ಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. 

ಮುರಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭೀಮಜ್ಜ ಗುರಿಕಾರ್, ಸಮಾಜದ ಮುಖಂಡ ಹನುಮಗೌಡ ಮಾಲಿಪಾಟೀಲ್, ಗುಂಡನಗೌಡ ಪಾಟೀಲ್ ಶ್ರೀಕಾಂತ ಮಾಲಿ ಪಾಟೀಲ್, ಮಾತನಾಡಿದರು. 

ಪಟ್ಟಣ ಪಂಚಾಯಿತಿ ಸದಸ್ಯ ಕಳಕಪ್ಪ ತಳವಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಳಪ್ಪ ಬಂಡ್ಲಿ, ವಾಲೇಕಾರ್, ಮುಖಂಡ ಹನುಮಂತಪ್ಪ ವಾಲ್ಮೀಕಿ ಉಪಸ್ಥಿತರಿದ್ದರು.

ಸುದ್ದಿ ಓದಿ