ಶಿರಹಟ್ಟಿ

ಪೊಲೀಸ್ ಠಾಣೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಪೊಲೀಸ್ ಠಾಣೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ


            ಶಿರಹಟ್ಟಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.ಈ ವೇಳೆಯಲ್ಲಿ ಪಿಎಸ್‌ಐ ಈರ​‍್ಪ ರಿತ್ತಿ ಮಾತನಾಡಿ, ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಹಾಗೂ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜೀವನ ಮತ್ತು ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರೀದೀಪವಾಗಿವೆ ಎಂದು ಹೇಳಿದರು.

            ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸತ್ಯ, ಧರ್ಮ, ತ್ಯಾಗ, ಕರ್ತವ್ಯನಿಷ್ಠೆ ಹಾಗೂ ಮಾನವೀಯ ಮೌಲ್ಯಗಳಿಗೆ ಅವರ ಜೀವನವೇ ಸಾಕ್ಷಿಯಾಗಿದೆ. ಇಂತಹ ಮಹನೀಯರ ಜಯಂತಿಗಳನ್ನು ಆಚರಿಸುವುದರಿಂದ ಅವರ ಸಾಧನೆ ಹಾಗೂ ಸಂದೇಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

            ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಪರಸ್ಪರ ಗೌರವದ ಭಾವನೆಗಳನ್ನು ಬೆಳೆಸಿಕೊಳ್ಳಬೇಕು. ಮಹರ್ಷಿ ವಾಲ್ಮೀಕಿಯವರ ಜೀವನ ಸಂದೇಶಗಳು ಎಲ್ಲರಿಗೂ ಸ್ಫೂರ್ತಿಯಾಗಿದ್ದು, ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಿರಹಟ್ಟಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. 


ಸುದ್ದಿ ಓದಿ