ಬಳ್ಳಾರಿ

ಜಿಲ್ಲಾಡಳಿತದಿಂದ ವಿಶ್ವಗುರು ಬಸವೇಶ್ವರ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ವಿಶ್ವಗುರು ಬಸವೇಶ್ವರ ಜಯಂತಿ ಆಚರಣೆ

ಬಳ್ಳಾರಿ 23: ವಿಶ್ವಗುರು ಬಸವೇಶ್ವರ ಜಯಂತಿ ಅಂಗವಾಗಿ ನಗರದ ಮೋತಿ ವೃತ್ತದ ಬಳಿಯಿರುವ ಬಸವಣ್ಣನವರ ಪುತ್ಥಳಿಗೆ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಅವರು ಮಾಲಾರೆ​‍್ಣ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ವಿಶ್ವಗುರು ಬಸವಣ್ಣನವರ 890 ನೇ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ನಿಮಿತ್ತ ಸರಳವಾಗಿ ಆಚರಿಸಲಾಯಿತು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್‌ಬಾಬು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರ​‍್ಪ ಸೇರಿದಂತೆ ಸಮಾಜದ ಮುಖಂಡರು ಮತ್ತಿತರರು ಇದ್ದರು. 

-------- 

ಹನ್ನೆರಡನೇ ಶತಮಾನದ ಸಾಮಾಜಿಕ ಕ್ರಾಂತಿಕಾರಿ ಬಸವಣ್ಣನವರು: ಪ್ರೊ.ಆಲಗೂರ 

ಬಳ್ಳಾರಿ 23 : ವಿಶ್ವಗುರು ಬಸವಣ್ಣನವರ ಮೌಲ್ಯ ಮತ್ತು ತತ್ವಾದರ್ಶಗಳು ನಮ್ಮೆಲ್ಲರಿಗೆ ದಾರೀದೀಪವಾಗಿದೆ, ಅವರು ತಮ್ಮ ವಚನಗಳ ಮೂಲಕ ಜಾತಿ ಭೇದ, ಲಿಂಗ-ತಾರತಮ್ಯ ಹಾಗೂ ಮೌಢ್ಯಗಳನ್ನು ತಡೆದುಹಾಕಲು ಹನ್ನೆರಡನೇ ಶತಮಾನದಲ್ಲಿ ಧ್ವನಿಯೆತ್ತಿ ಸಾಮಾಜಿಕ ಕ್ರಾಂತಿಕಾರಿಯಾಗಿದ್ದರು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿದ್ದು ಪಿ ಆಲಗೂರ ಅವರು ಹೇಳಿದರು. 

    ನಗರದ ಹೊರವಲಯದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ  ಆಯೋಜಿಸಿದ್ದ ಬಸವಣ್ಣನವರ 890ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

    ಕಾಯಕವೆಂದರೆ ಕೇವಲ ಕೆಲಸವಲ್ಲದೆ, ದೇಹವನ್ನೇ ದೇವಾಲಯವನ್ನಾಗಿ ಮಾಡಿ ಮೋಕ್ಷವನ್ನು ಪಡೆಯುವುದೆ ನಿಜವಾದ ಕಾರ್ಯ ಎಂದು ತಿಳಿಸಿದರು. ಅವರ ವಚನಗಳ ಸಾರಾಂಶವನ್ನು ಅರ್ಥೈಸಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ  ಉತ್ತಮ ಬದುಕನ್ನು ಕಟ್ಟಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ ಎಂದರು. 

    ಪ್ರಜಾ ಪ್ರಭುತ್ವ, ಸಂವಿಧಾನ ವಿಚಾರಗಳನ್ನು ಬಸವಣ್ಣನವರು 12ನೇ ಶತಮಾನದಲ್ಲಿಯೇ ಪರಿಚಯಿಸಿದ್ದು ಹೆಮ್ಮೆಯ ಸಂಗತಿಯಾಗಿದೆ. ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ. ಅವರು ತೋರಿದ ಹಾದಿಯಲ್ಲಿ ನಡೆಯುತ್ತಾ ಸಮಾನತೆಯ ತತ್ವಗಳನ್ನು ಪಾಲಿಸೋಣ ಎಂದು ಹೇಳಿದರು. 

    ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಘಟಕದ ಸಂಯೋಜಕರಾದ ಡಾ. ಅರುಣಕುಮಾರ ಲಗಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಸವಣ್ಣನವರ ವಚನಗಳು ರಚನೆಯಾಗಿ ಹಲವಾರು ವರ್ಷಗಳಾಗಿದ್ದರೂ ಅವು ಇಂದಿಗೂ ಪ್ರಚಲಿತವಾಗಿವೆ, ಅವರ ವಚನ ಸಾಹಿತ್ಯವು ಭಾರತವಷ್ಟೇ ಅಲ್ಲದೆ ವಿಶ್ವದೆಲ್ಲೆಡೆ ಆವರಿಸಿವೆ. ಅವರ ವಚನಗಳು ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಸಾರುತ್ತವೆ ಎಂದರು. 

 ಸಿ.ಡಿ.ಸಿ ನಿರ್ದೇಶಕ ಡಾ.ಕೆ.ಸಿ ಪ್ರಶಾಂತ್, ಅನ್ವಯಿಕ ವಿಜ್ಞಾನ  ಡೀನರು ಹಾಗೂ ಐಕ್ಯೂಎಸಿ ನಿರ್ದೇಶಕ ​‍್ರೊ.ತಿ​‍​‍್ೇರುದ್ರ​‍್ಪ.ಜೆ, ಡಾ.ಶಶಿಧರ ಕೆಲ್ಲೂರ್, ಡಾ.ಅರುಣಕುಮಾರ ಲಗಶೆಟ್ಟಿ, ಡಾ.ನಾಗಭೂಷಣ್‌.ಸಿ.ಎಂ ಅವರು ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ