ಗದಗ

ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಲೋಕದರ್ಶನ ವರದಿ 

             ಗದಗ 11:   ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ  ಬುಧವಾರ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ಅವರು ವೀರವನಿತೆ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ  ಪುಷ್ಪ ಸಮರ​‍್ಿಸಿ ನಮನ ಸಲ್ಲಿಸಿದರು. 

          ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್,  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ತಹಶೀಲ್ದಾರರಾದ ಜಯಲಕ್ಷ್ಮೀ ವಸ್ತ್ರದ  ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ  ಗಣ್ಯರು, ಹಿರಿಯರು ಹಾಜರಿದ್ದರು. 


ಸುದ್ದಿ ಓದಿ