ಸ.ಮಾ.ಪ್ರಾ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮರ ಜನ್ಮದಿನಾಚರಣೆ
ಲಕ್ಷ್ಮೇಶ್ವರ 02: ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇಯ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ 122 ನೆಯ ಜನ್ಮದಿನ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಪಿತಾಮಹಾತ್ಮರ ಜನ್ಮದಿನವನ್ನು ಆಚರಿಸಿ ಇದೇ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಸೋ ಮತ್ತು ಸಾಕ್ಷಿಗಳನ್ನು ವಿತರಿಸಲಾಯಿತು.
ರಾಷ್ಟ್ರಪಿತ ಮಹಾತ್ಮರ ಜನ್ಮದಿನವನ್ನು ಆಚರಿಸಿ ಮಾತನಾಡಿದ ಶಾಲೆಯ ಪ್ರಧಾನ ಗುರುಗಳಾದ ಬಸವರಾಜ ಕುಂಬಾರ ಅವರು ಮಹಾತ್ಮ ಗಾಂಧೀಜಿಯವರ ಸತ್ಯ ಅಹಿಂಸೆ ಸರಳತೆ ಸೇವೆ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ತಮ್ಮ ಬದುಕಿನ ಮೂಲಕ ಸಾರಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜೀವನದ ಬದುಕು ಉನ್ನತ ದೇಶದ ಅಭಿವೃದ್ಧಿಗೆ ಮುನ್ನಡೆ ಬರೆದಿದೆ.
ಅಂತಾ ಸಹ ನ್ಮೂರ್ತಿಯ ಮಹಾತ್ಮರ ಬದುಕಿನ ಆದರ್ಶಗಳು ನಮಗೆಲ್ಲ ಮಾದರಿಯಾಗಿದೆ ಅವರ ಜನ್ಮದಿನ ಆಚರಣೆಯೊಂದಿಗೆ ಅವರ ಬದುಕಿನ ಜೀವನದ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿ ಕೊಂಡು ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗೋಣ ಎಂದರು ಈ ಸಮಯದಲ್ಲಿ ಶಾಲೆಯ ಶಿಕ್ಷಕಿಯರಾದ ಎಚ್ ಡಿ ನಿಂಗರೆಡ್ಡಿ ಆರ್ ಕೆ ಉಪನಾಳ ಆರ್ ಎಂ ಶಿರಹಟ್ಟಿ ಎಲ್ ಎ ಬಣಕಾರ ಸೇರಿದಂತೆ ಶಾಲೆಯಲ್ಲ ಶಿಕ್ಷಕಿಯರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು