ಯರಗಟ್ಟಿ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ವಿಜಯೋತ್ಸವ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ವಿಜಯೋತ್ಸವ

ಯರಗಟ್ಟಿ 23:   ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ವಿಜಯೋತ್ಸವವನ್ನು ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. 

ಈ ಸಂದರ್ಭದಲ್ಲಿ ತಹಶೀಲ್ದಾರ ಎಂ ವ್ಹಿ ಗುಂಡಪ್ಪಗೋಳ ಅವರು ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಧೈರ್ಯ, ಸಾಹಸ, ದೇಶಪ್ರೇಮ ಹಾಗೂ ಸ್ವಾಭಿಮಾನ ಇಂದಿನ ಯುವಪೀಳಿಗೆಗೆ ಮಾದರಿಯಾಗಿದೆ. ಅವರ ತ್ಯಾಗ, ಬಲಿದಾನ ಮತ್ತು ಹೋರಾಟದ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ಸಾರಲಾಯಿತು. ಈ ವೇಳೆ ಉಪತಹಶೀಲ್ದಾರ ಸಂತೋಷ ಜಾದವ, ಶಿಕ್ಷಣ ಸಂಯೋಜಕ ಎಂ ಬಿ. ಕಡಕೋಳ, ರಾಜ್ಯ ಸಂಪನ್ಮೂಲ ವ್ಯಕ್ತಿಯಾದ ಎಂ ಎಂ ಚೀಲದಲ, ಶಿಕ್ಷಕ ಎಸ್ ಬಿ ಮಿಕಲಿ, ಗ್ರಾಮ ಆಡಳಿತಾಧಿಕಾರಿ ಶಾಹೀನ ಮಿಶ್ರಕೋಟಿ, ಪರಂಡೆಪ್ಪ ಹೊಟ್ಟೇನ್ನವರ, ದಾನೇಶ್ವರ ಮಠ, ಸ್ವರೂಪ ಚಪಳ್ಳಿ,  ಎಲ್‌. ಸಿ. ತಳವಾರ, ಪಂಚಮಸಾಲಿ ಸಮಾಜದ ಮುಖಂಡರಾದ ಶಿವಾನಂದ ಬಳಿಗಾರ, ಈರಣ್ಣಾ ಹೂಲ್ಲೂರ ರವಿಕುಮಾರ ಅಣ್ಣಿಗೇರಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ವೀರರಾಣಿ ಕಿತ್ತೂರು ಚೆನ್ನಮ್ಮ ಅವರಿಗೆ ಗೌರವ ಸಲ್ಲಿಸಿದರು. 


ಸುದ್ದಿ ಓದಿ