ಎನ್ಡಿಎ ಅಭ್ಯರ್ಥಿಗಳ ಗೆಲುವಿಗೆ ವಿಜಯೋತ್ಸವ ಆಚರಣೆ
ಲೋಕದರ್ಶನ ವರದಿ
ಶಿರಹಟ್ಟಿ : ಪಶ್ಚಿಮ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಶಿರಹಟ್ಟಿ ನಗರದ ಬಸವೇಶ್ವರ ವೃತ್ತದಲ್ಲಿ ಎನ್ಡಿಎ ಮಿತ್ರಕೂಟದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡ ಸಂದೀಪ ಕಪ್ಪತ್ತನವರ ಮಾತನಾಡಿ, ಎಸ್.ವಿ. ಸಂಕನೂರ ಅವರ ಹೋರಾಟ, ಸಾಧನೆ ಹಾಗೂ ಶಿಕ್ಷಕರ ಮತ್ತು ಪದವೀಧರರ ಪರವಾಗಿ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ರಾಜ್ಯದಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯ ನಾಲ್ಕೂ ಕ್ಷೇತ್ರಗಳಲ್ಲಿ ಎನ್ಡಿಎ ಜಯಭೇರಿ ಬಾರಿಸಿರುವುದು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಹಾಗೂ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕೀರೇಶ ರಟ್ಟಿಹಳ್ಳಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಾಮಣ್ಣ ಕಂಬಳಿ, ಗುಳ್ಳಪ್ಪ ಕರಿಗಾರ, ಪ್ರಧಾನ ಕಾರ್ಯದರ್ಶಿ ಬಸವರಾಜ ವಡವಿ, ಸುಧೀರ ಜಮಖಂಡಿ, ಜಗದೀಶ ತೇಲಿ, ಅಶೋಕ ವರವಿ, ಅಕ್ಬರಸಾಬ ಯಾದಗೇರಿ, ನಂದಾ ಪಲ್ಲೆದ, ಜೆಡಿಎಸ್ ತಾಲೂಕು ಅಧ್ಯಕ್ಷ ಶರಣಪ್ಪ ಹೂಗಾರ, ಮುನ್ನ ಡಾಲಯತ, ಶಶಿ ಪೂಜಾರ, ಬಸವರಾಜ ಕಲ್ಯಾಣಿ, ವಿಠ್ಠಲ ಬಿಡವೆ, ವಿನೋದ ಕಪ್ಪತ್ತನವರ, ಮಂಜುನಾಥ ವಡ್ಡರ, ಶಿವಯೋಗಿ ತುಳಿ, ಸೇರಿದಂತೆ ಅನೇಕ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.