ಕಾರವಾರದಲ್ಲಿ ಸಾರ್ವಜನಿಕ ಗಣಪತಿ ಉತ್ಸವದ ಸಂಭ್ರಮ

ಕಾರವಾರದಲ್ಲಿ ಸಾರ್ವಜನಿಕ ಗಣಪತಿ ಉತ್ಸವದ ಸಂಭ್ರಮ  Celebrations of the public Ganesha festival in Karwar


ಕಾರವಾರ 16: ನಗರದ ವಿವಿಧ ಬಡಾವಣೆಗಳಲ್ಲಿ ಸಾರ್ವಜನಿಕ ಗಣಪತಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕೋಡಿಭಾಗ, ಕಾಜೂಭಾಗ ಹಾಗೂ ಮಾರುತಿಗಲ್ಲಿಯ ಮಾರುತಿ ದೇವಸ್ಥಾನದಲ್ಲಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಉತ್ಸವದ ಅಂಗವಾಗಿ ವಿವಿಧ ಬಡಾವಣೆಗಳಲ್ಲಿ ಭಕ್ತರು ಗಣಪತಿ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದಾರೆ.