ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಿ: ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ
Central Government should immediately respond to issues in the education sector: Support for Sonam W
ಕೊಪ್ಪಳ 17: ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚುಕ್ ಅವರಿಗೆ ಬೆಂಬಲ ವ್ಯಕ್ತಪಡಿಸಿ, ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಕೊಪ್ಪಳದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ನಂತರ ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣೂರು ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯ ಸಂಚಾಲಕ ಚಿಂತಕ ಬಸವರಾಜ್ ಶೀಲವಂತರ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಗಳ ಕುರಿತು ಸೋನಂ ವಾಂಗ್ಚುಕ್ ಅವರು ಶಾಂತಿಯುತವಾಗಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ ಎಂದು ಹೇಳಿದರು. ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಶಿಕ್ಷಣ ಕ್ಷೇತ್ರದ ವಿಚಾರಗಳಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಬಾರದು. ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಯುವ ಮುಖಂಡ ಕಾಶೀಂ ನಾಗೇಶನಹಳ್ಳಿ ಮಾತನಾಡಿ, ದೇಶದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಕೇಂದ್ರ ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸಿ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಸೋನಂ ವಾಂಗ್ಚುಕ್ ಅವರ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ವಿಳಂಬ ಮಾಡದೆ ಕ್ರಮ ಕೈಗೊಳ್ಳಬೇಕು. ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸೂಕ್ತ ಸಂವಾದ ಆರಂಭಿಸಬೇಕು ಎಂದು ಆಗ್ರಹಿಸಿದರು.
ಕೆವಿಎಸ್ ಮುಖಂಡ ಯಮನೂರ್ಪ ಈಳಿಗನೂರು ಮಾತನಾಡಿ, ಶಾಂತಿಯುತವಾಗಿ ನಡೆಯುತ್ತಿರುವ ಹೋರಾಟಗಳನ್ನು ನಿರ್ಲಕ್ಷಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಪ್ರತಿಭಟನೆಯಲ್ಲಿ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ. ಗಫಾರ್, ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ತುಕಾರಾಮ್ ಪಾತೋಟ್ಟಿ, ಸಾಹಿತಿ ಡಿ.ಎಂ. ಬಡಿಗೇರ್, ಶಶಿಕಲಾ ಡಿ. ಮಠದ, ದಿಲ್ಶಾದ್ ನದಾಫ್, ಗೌರಿ ಗೋನಾಳ, ನಿಂಗು ಬೆಣಕಲ್, ಕರಿಯಪ್ಪ ಮಣ್ಣಿನವರ, ಮುದಕಪ್ಪ ಎಂ. ಹೊಸಮನಿ, ಶಿವಪ್ಪ ಹಡಪದ, ಮಖಬೂಲ್ ರಾಯಚೂರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 