ವಿಜಯನಗರ

ಕೇಂದ್ರ ಬರ ಅಧ್ಯಯನ ತಂಡದಿಂದ ವಿವಿಧ ಗ್ರಾಮಗಳಲ್ಲಿ ಬರ ಪರಿಸ್ಥಿತಿ ಪರೀಶೀಲನೆ

ಕೇಂದ್ರ ಬರ ಅಧ್ಯಯನ ತಂಡದಿಂದ ವಿವಿಧ ಗ್ರಾಮಗಳಲ್ಲಿ ಬರ ಪರಿಸ್ಥಿತಿ ಪರೀಶೀಲನೆ



ವಿಜಯನಗರ (ಹೊಸಪೇಟೆ), ಅ.5 ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರೀಶೀಲಿಸಲು ಆಗಮಿಸಿರುವ ಕೇಂದ್ರ ಬರ ಅಧ್ಯಯನ ತಂಡವು ಸೋಮವಾರ ಹರಪನಹಳ್ಳಿ ಮತ್ತು ಹೂವಿನಹಡಗಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರು, ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರಿಂದ ನೇರವಾಗಿ ಮಾಹಿತಿ ಸಂಗ್ರಹಿಸಿತು.  

ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳಾದ ಅಜಿತ್ ಕುಮಾರ್ ಸಾವು ನೇತೃತ್ವದ ತಂಡದ ಸದಸ್ಯರಾದ ಕರ್ನಲ್ ಅಮರೇಂದ್ರ ಸಿಂಗ್, ಚೇತ್ ರಾಮ್ ಮೀನಾ ಅವರ ತಂಡವು ಜಿಲ್ಲೆಯ ವಿವಿಧೆಡೆ ಬರ ಪರಿಸ್ಥಿತಿಯನ್ನು ಪರೀಶೀಲಿಸಿತು. ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರು ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಕೊರತೆ, ಬೆಳೆ ಹಾನಿ, ಕುಡಿಯುವ ನೀರಿನ ಲಭ್ಯತೆ ಹಾಗೂ ಗ್ರಾಮೀಣ ಉದ್ಯೋಗದ ಪರಿಸ್ಥಿತಿಗೆ ಸಂಬಂಧಿಸಿದಂತೆ ತಂಡಕ್ಕೆ ಮಾಹಿತಿ ನೀಡಿದರು. ನೀಲಗುಂದ ಕೆರೆಯಲ್ಲಿ ವಿಬಿ ಜಿ ರಾಮ್ ಜಿಯಡಿ ಕ?ಗೊಂಡಿರುವ ಕೆರೆ ಹೂಳೇತ್ತುವ ಕಾಮಗಾರಿ ಪರೀಶೀಲನೆ ನಡೆಸಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.  


ಸುದ್ದಿ ಓದಿ