ಕೇಂದ್ರದ ಯೋಜನೆಗಳನ್ನು ಸಮರ​‍್ಕವಾಗಿ ಅನುಷ್ಠಾನಗೊಳಿಸಬೇಕು: ಜಗದೀಶ್ ಶೆಟ್ಟರ್

ಕೇಂದ್ರದ ಯೋಜನೆಗಳನ್ನು ಸಮರ​‍್ಕವಾಗಿ ಅನುಷ್ಠಾನಗೊಳಿಸಬೇಕು: ಜಗದೀಶ್ ಶೆಟ್ಟರ್ Central schemes should be implemented effectively: Jagadish Shettar


ಬೆಳಗಾವಿ, ಜೂನ್ 02: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಜಲ ಜೀವನ ಮಿಷನ್' ಅಡಿಯಲ್ಲಿ ಪ್ರತಿ ಗ್ರಾಮೀಣ ಮನೆಗೂ ನಲ್ಲಿ ನೀರು ಒದಗಿಸುವ ಯೋಜನೆಯನ್ನು ಜಿಲ್ಲೆಯಲ್ಲಿ ಮತ್ತಷ್ಟು ಸಮರ​‍್ಕವಾಗಿ ಜಾರಿಗೊಳಿಸಬೇಕು. ಕೇಂದ್ರದ ವಿವಿಧ, ಯೋಜನೆಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಬೇಕು ಎಂದು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಸುವರ್ಣ ವಿಧಾನ ಸೌಧದ ವಿಡಿಯೋ ಕಾನ್ಫರೆನ್ಸ್‌ ಹಾಲ್ ನಲ್ಲಿ ಮಂಗಳವಾರ (ಜೂ.02) ನಡೆದ 2026-27ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಬೆಳಗಾವಿ ಜಿಲ್ಲೆ ಎಲ್ಲ ರೀತಿಯಿಂದ ಸಂಪನ್ಮೂಲ ಭರಿತ ಜಿಲ್ಲೆಯಾಗಿದ್ದು, ಶಿಕ್ಷಣಕ್ಕೆ ಹೆಚ್ಚು ಒತ್ತುಕೊಟ್ಟು ಉಡುಪಿ ಮತ್ತು ಮಂಗಳೂರು ಅಂಕ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿರುತ್ತವೆ ಅದೇ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಗುಣಮಟ್ಟದ ಹೆಚ್ಚಿಸಬೇಕು. ಮುಂಬರುವ ದಿನಮಾನಗಳಲ್ಲಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಇನ್ನೂ ಉತ್ತಮವಾದಂತಹ ಸಾಧನೆ ಮಾಡುವಂತಹ ಕಾರ್ಯಕ್ರಮಗಳನ್ನು ರೂಪಿಸಲು ತಿಳಿಸಿದರು. 

ಗ್ರಾಮ ಪಂಚಾಯಿತಿಗಳ ನರೇಗಾ ಯೋಜನೆಯಡಿ ಕೈಗೊಳ್ಳಬೇಕಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜಕೀಯವಾಗಿ ಯಾವುದೇ ಹಸಕ್ಷೇಪ ಇಲ್ಲದೇ ನಿಯಮಸುವಾರ ಕೈಗೆತ್ತಿಕೊಳ್ಳಬೇಕು. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಜಲ ಜೀವನ ಮಿಷನ್ ಕೆಲವು ಗ್ರಾಮಗಳಲ್ಲಿ ಪರಿಪೂರ್ಣವಾಗಿ ಅನುಷ್ಠಾನವಾಗಿಲ್ಲ. ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಕಾರಣ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆಗಳು ಈಗಾಗಲೇ ಪ್ರಾರಂಭವಾಗಿದ್ದು, ಕೂಡಲೇ ಅಂತಹ ಪ್ರದೇಶಗಳನ್ನು ಗುರುತಿಸಿ ಕುಡಿಯುವ ನೀರು ಪೂರೈಕೆಗೆ ಸಮರ​‍್ಕ ಅನುಷ್ಠಾನಗೊಳಿಸಬೇಕು. 

ಕೇಂದ್ರ ಸರ್ಕಾರದ ಜಲ ಜೀವನ ಮಿಷನ್ ಅನುಷ್ಠಾನಕ್ಕೆ ಅಧಿಕಾರಿಗಳು ಹಿಂದೇಟು ಹಾಕಬಾರದು ಇದರಿಂದ ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆಗಳು ಎದುರಾಗುವ ಸಂಭವವಿದೆ. 

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಪ್ರಗತಿಯಲ್ಲಿ ಇದ್ದು ಜಿಲ್ಲೆಯ ರೈತರಿಗೆ ಬೇಕಾದಂತಹ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ​‍್ಕವಾಗಿ ವಿರಣೆಯಾಗಬೇಕು. ಪ್ರಸ್ತುತ ಜಿಲ್ಲೆಯಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ನಿರ್ವಹಣೆ ಉತ್ತಮವಾಗಿದ್ದು ಮುಂದಿನ ದಿನಮಾನಗಳಲ್ಲಿ ಜಿಲ್ಲೆಗೆ ಬೇಕಾದಂತಹ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಆದಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸುವುದರ ಮೂಲಕ ರಸಗೊಬ್ಬರ ಪೂರೈಕೆಗೆ ಪ್ರಯತ್ನಿಸಲಾಗುವುದು ಎಂದರು. 

ಸ್ಮಾರ್ಟ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವುದರ ಮೂಲಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳನ್ನು ಕೈಗೊಂಡಂತಹ ಪ್ರದೇಶಗಳಲ್ಲಿ ರಸ್ತೆ ದುರಸ್ತಿ ಕುರಿತು ದೂರುಗಲಕು ಬಂದಿದ್ದು ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. 

ಜಿಲ್ಲೆಯಲ್ಲಿ ಬರುವಂತ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಎಲ್‌.ಎನ್‌.ಟಿ ನಗರದಲ್ಲಿ ಕುಡಿಯುವ ನೀರು ಸಮಸ್ಯೆಗೆ ಪಾಲಿಕೆ ಆಯುಕ್ತರ ಜವಾಬ್ದಾರಿ ತೆಗೆದುಕೊಂಡು ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು. 

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಅನುಷ್ಠಾನಕ್ಕಾಗಿ ಪ್ರೊತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬ್ಯಾಂಕಗಳು ಕೂಡ ಮಾನವೀಯತೆ ದೃಷ್ಟಿಯಿಂದ ರೈತರಿಗೆ ಹಾಗೂ ದುರ್ಬಲ ವರ್ಗದವರಿಗೆ ಸಾಲ, ಸಬ್ಸಿಡಿ ಒದಗಿಸಲು ತಿಳಿಸಿದರು. 

ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಅಲ್ಲದೇ ಅಗತ್ಯದ ಜೌಷಧಿಗಳನ್ನು ದಾಸ್ತಾನು ಮಾಡಿಕೊಳ್ಳುವಂತೆ ಸೂಚಿಸಿದರು. 

ಇ-ಸ್ವತ್ತು ಅಡಿ ಪ್ರಮಾಣ ಪತ್ರಗಳನ್ನು ತ್ವರಿತವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕು. ವಿಧ್ಯುತ್ ಪರಿವರ್ತಕಗಳ ದುರಸ್ತಿ ಕುರಿತು ರೈತರಿಂದ ದೂರುಗಳು ಬರುತ್ತಿದ್ದು ವಿಧ್ಯುತ್ ಪರಿವರ್ತಕಗಳ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಸ್ಮಶಾನಗಳ ಅಭಿವೃದ್ಧಿ ಕುರಿತು ಕ್ರಮ ಕೈಗೊಳ್ಳಬೇಕು. 

ಅಡುಗೆ ಅನೀಲ ಹಾಗೂ ಪೆಟ್ರೋಲ್ ದಾಸ್ತಾನು ಸ್ಥಿತಿಗತಿ ಕುರಿತು ಮಾಹಿತಿ ಪಡೆದು ಜಿಲ್ಲೆಯಲ್ಲಿ ಕೊರತೆ ಪೆಟ್ರೋಲ್ ಹಾಗೂ ಅಡುಗೆ ಅನೀಲದ ಕೊರತೆ ಆಗದಂತೆ ನಿಗಾ ವಹಿಸಲು ಸಂಸದರಾದ ಜಗದೀಶ ಶೆಟ್ಟರ ಅವರು ತಿಳಿಸಿದರು. 

ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಅವರು ಮಾತನಾಡಿ ವಿ.ಬಿ-ಜಿ, ರಾಮ- ಜಿ ಯೋಜನೆಯಡಿ ಅನೇಕ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗಿದ್ದು ಈ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದರು. 

ಪ್ರಧಾನ ಮಂತ್ರಿ ಗ್ರಾಮ ಸಡಕ್ ಹಾಗೂ ಗ್ರಾಮಪಥ್ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ವಿವರ ಒದಗಿಸಲು ತಿಳಿಸಿ ಆಯಾ ತಾಲೂಕುಗಳಲ್ಲಿ ಅಗತ್ಯಕನುಗುಣವಾಗಿ ಕಾಮಗಾರಿಗಳನ್ನು ಕೈಗೊಳ್ಳಲು ತಿಳಿಸಿದರು. 

ರೈತರ ಶ್ರೇಯೊಭಿವೃದ್ಧಿಗಾಗಿ ಕೇಂದ್ರ ಸರಕಾರದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದು ಬ್ಯಾಂಕ್ ಸಬ್ಸಿಡಿಗಳನ್ನು ಸಹ ನೀಡುತ್ತಿದೆ. ಬ್ಯಾಂಕಗಳು ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದರ ಮೂಲಕ ಬ್ಯಾಂಕ್ ವತಿಯಿಂದ ಒದಗಿಸಲಾಗುವ ಬ್ಯಾಂಕ್ ಸಾಲ ಹಾಗೂ ಸಬ್ಸಿಡಿಗಳನ್ನು ಕಾಲ ಮಿತಿಯೊಳಗೆ ಒದಗಿಸಲು ತಿಳಿಸಿದರು. 

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಮಾತನಾಡಿ ಜಿಲ್ಲೆಯ ಶೈಕ್ಷಣಿಕವಾಗಿ ಉತ್ತಮಗೊಳಿಸುವ ನಿಟ್ಟಿನಲ್ಲಿ ಅನೇಕ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಲಾಗಿರುತ್ತದೆ ಎಂದರು. 

ಬ್ಯಾಂಕುಗಳು ಹೊಬಳಿ ಮಟ್ಟದಲ್ಲಿ ಅಭಿಯಾನವನ್ನು ಕೈಗೊಳ್ಳುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಬ್ಯಾಂಕುಗಳಿಂದ ದೊರೆಯುವಂತಹ ಸಾಲ, ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಲು ತಿಳಿಸಿದರು. 

ಕೇಂದ್ರ ಸರಕಾರದ ಯೋಜನೆಗಳ ಕುರಿತು ಹೊರಡಿಸಲಾದ ಮಾರ್ಗಸೂಚಿಗಳಲ್ಲಿ ಏನಾದರು ಮಾರ​‍್ಾಡು ಮಾಡ ಬೇಕಾದಲ್ಲಿ ಆ ಕುರಿರು ವಿಸ್ತೃತ ವರದಿಯನ್ನು ಸಂಸದರುಗಳ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಕುಡಿಯುವ ನೀರು ಸಮಸ್ಯೆಯಿರುವ ಊರುಗಳಿಗೆ ನೀರು ಪೂರೈಕೆಗೆ ಚಿಕ್ಕೋಡಿ ಭಾಗದಲ್ಲಿ 22 ಬೋರವೆಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಸ್ವಂತ ವಾಟರ್ ಟ್ಯಾಂಕರ್ ಗಳು ಇವೆ. ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಪೌರೈಕೆಗೆ ಕ್ರಮ ವಹಿಸಲಾಗಿದೆ. ಕುಡಿಯುವ ನೀರು ಸಮಸ್ಯೆ ಶಾಶ್ವತ ಪರಿಹಾರಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಹೇಳಿದರು.