ಪಿಎಂ ಕಿಸಾನ್ ಯೋಜನೆ ಮುಂದುವರಿಕೆಗೆ ಕೇಂದ್ರದ ಅನುಮೋದನೆ: ವೀರಣ್ಣ ಅಂಗಡಿ ಹರ್ಷ
Centre approves continuation of PM Kisan scheme: Veeranna Angadi expresses happiness
ಶಿರಹಟ್ಟಿ 02 : ಕೇಂದ್ರ ಸರ್ಕಾರವು 2026-27ರಿಂದ 2030-31ರವರೆಗೆ ಮುಂದಿನ ಐದು ವರ್ಷಗಳ ಕಾಲ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಮುಂದುವರಿಸಲು ಸುಮಾರು 3.15 ಲಕ್ಷ ಕೋಟಿ ಅನುದಾನ ಮಂಜೂರು ಮಾಡಿರುವುದಕ್ಕೆ ಬಿಜೆಪಿ ರೈತ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ವೀರಣ್ಣ ಅಂಗಡಿ ಹರ್ಷ ವ್ಯಕ್ತಪಡಿಸಿದ್ದಾರೆ. ರೈತರ ಆರ್ಥಿಕ ಭದ್ರತೆ ಹೆಚ್ಚಿಸುವ ಉದ್ದೇಶದಿಂದ 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯು ವಿಶ್ವದ ಅತಿದೊಡ್ಡ ನೇರ ನಗದು ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ಈ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ಸಹಾಯಧನವನ್ನು ಮೂರು ಕಂತುಗಳಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ 23 ಕಂತುಗಳ ಮೂಲಕ ದೇಶದ ರೈತರಿಗೆ 4.46 ಲಕ್ಷ ಕೋಟಿಗೂ ಅಧಿಕ ಮೊತ್ತ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಸಣ್ಣ ಹಾಗೂ ಅತಿಸಣ್ಣ ರೈತರಿಗೆ ಬೀಜ, ಗೊಬ್ಬರ, ಕೀಟನಾಶಕ ಸೇರಿದಂತೆ ಕೃಷಿ ವೆಚ್ಚಗಳನ್ನು ನಿರ್ವಹಿಸಲು ಈ ಯೋಜನೆ ಸಹಕಾರಿಯಾಗಿದ್ದು, ಅನೌಪಚಾರಿಕ ಸಾಲಗಳ ಅವಲಂಬನೆ ಕಡಿಮೆ ಮಾಡಲು ನೆರವಾಗುತ್ತಿದೆ ಎಂದರು. ಪ್ರಸ್ತುತ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮುಂದುವರಿಕೆ ರೈತರಲ್ಲಿ ಸಂತಸ ಮೂಡಿಸಿದೆ. ಯೋಜನೆಯು ಪಾರದರ್ಶಕವಾಗಿದ್ದು, ಮಧ್ಯವರ್ತಿಗಳಿಲ್ಲದೆ ನೇರವಾಗಿ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ ಎಂದು ವೀರಣ್ಣ ಅಂಗಡಿ ಹೇಳಿದರು. ರೈತರು ತಮ್ಮ ದಾಖಲೆಗಳನ್ನು ಸರಿಪಡಿಸಿಕೊಂಡು ಶೀಘ್ರವೇ ಇ-ಕೆವೈಸಿ ಪೂರ್ಣಗೊಳಿಸುವ ಮೂಲಕ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯಬೇಕು ಎಂದು ಅವರು ಮನವಿ ಮಾಡಿದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 