ಸ್ಕಿಲ್ ಹಬ್ ಯೋಜನೆಯಡಿ 30 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ
Certificates distributed to 30 students under the Skill Hub scheme
ಲೋಕದರ್ಶನ ವರದಿ
ಗದಗ, ಜು.28: ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ), ಗದಗ ವತಿಯಿಂದ ಸ್ಕಿಲ್ ಹಬ್ ಯೋಜನೆಯಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಪ್ರಮಾಣಪತ್ರ ವಿತರಣಾ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ಡಾ. ಮಲ್ಲೂರ ಬಸವರಾಜ್ ಮಾತನಾಡಿ, ಇಂದಿನ ಯುವಜನತೆಗೆ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ವಿವರಿಸಿದರು. ಉದ್ಯೋಗಾವಕಾಶಗಳನ್ನು ಹೆಚ್ಚಿಸಿಕೊಳ್ಳಲು ಕೌಶಲ್ಯ ತರಬೇತಿ ಅತ್ಯವಶ್ಯಕವಾಗಿದ್ದು, ವಿದ್ಯಾರ್ಥಿಗಳು ಇಂತಹ ತರಬೇತಿಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಪೂರ್ಣಿಮಾ ಹೊಸಮನಿ ಮಾತನಾಡಿ, ಸ್ಕಿಲ್ ಹಬ್ ಯೋಜನೆಯ ವಿಶೇಷತೆ ಹಾಗೂ ಅದರ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಯೋಜನೆಯ ಮೊದಲ ಬ್ಯಾಚ್ನಲ್ಲಿ 30 ವಿದ್ಯಾರ್ಥಿಗಳು 300 ಗಂಟೆಗಳ ‘ಜೂನಿಯರ್ ಟೆಕ್ನಿಷಿಯನ್ ಹಿ ಎಲೆಕ್ಟ್ರಿಕ್ ವೆಹಿಕಲ್’ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಪ್ರಮಾಣಪತ್ರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಮುದಕಪ್ಪ ಕುರಿ, ಕಾರ್ಯಕ್ರಮದ ಸಂಯೋಜನಾಧಿಕಾರಿ ಶ್ರೀಮತಿ ಸುನೀತಾ ಸಾಕೇನವರ, ತರಬೇತುದಾರ ಮಹೇಶ್ ಸಿ.ಎಸ್. ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕ ಎಚ್.ಎ. ಕನೂರ ಉಪಸ್ಥಿತರಿದ್ದರು. ಮಹೇಶ್ ಸಿ.ಎಸ್. ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಎಚ್.ಎ. ಕನೂರ ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 