ಉದ್ಯೋಗ ಖಾತ್ರಿ ಕಾರ್ಯಗಾರದಲ್ಲಿ ಪಾಲ್ಗೊಂಡ ಕಾರ್ಮಿಕರಿಗೆ ಪ್ರಮಾಣ ಪತ್ರ
Certificates for workers who participated in the job guarantee workshop
ರಾಣೇಬೆನ್ನೂರು 07: ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಇತ್ತೀಚೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡ ಕಾಯಕ ಬಂಧುಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಶಾಸಕ ಪ್ರಕಾಶ ಕೋಳಿವಾಡ ಆವರು ಕಾಯಕ ಬಂಧುಗಳು ಶ್ರಮಿಕರು. ದೇಶದ ಆರ್ಥಿಕತೆಯ ಸಮಾನತೆಗೆ ಶ್ರಮಿಕ ಬಂಧುಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದರು.
ಸರ್ಕಾರದ ಯೋಜನೆಗಳು ಹತ್ತು ಹಲವು ಅವುಗಳು ಪರಿಪೂರ್ಣ ಜಾರಿಗೊಳಿಸುವಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದ ಅವರು ಕೌಶಲ್ಯತೆ ತರಬೇತಿಗಳು ಮೇಲಿಂದ ಮೇಲೆ ನಡೆದಾಗ ಮಾತ್ರ ಕಾಯಕ ಬಂಧುಗಳಲ್ಲಿ ಹೊಸ ಚೈತನ್ಯ ಮೂಡಲಿದೆ ಎಂದರು.
ಕಾರ್ಯಕ್ರಮವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಮತ್ತು ತಾಲೂಕ ಪಂಚಾಯತ್, ಗ್ರಾಮ ಸ್ವರಾಜ್ ಅಭಿಯಾನ ಕರ್ನಾಟಕ ಸಹಭಾಗಿತ್ವ ಸಂಸ್ಥೆ ನವೋದಯ ಶಿಕ್ಷಣ ಮತ್ತು ಪರಿಸರ ಅಭಿವೃದ್ಧಿ ಆಯೋಜಿಸಿದ್ದವು. ಪ್ರಾಸ್ತಾನಿಕವಾಗಿ ಮಾತನಾಡಿದ ನೀಡ್ಸ್ ಅಧ್ಯಕ್ಷ ಎಚ್.ಎಫ್. ಆಕ್ಕಿ ಅವರು, ಕಾಯಕ ಬಂಧುಗಳಿಗಾಗಿಯೇ ಇರುವ ಕಾರ್ಯಗಾರಗಳು, ಗ್ರಾಮ ಸ್ವರಾಜ್ ಅಭಿಯಾನದ ಅಡಿಯಲ್ಲಿ ಆಯೋಜಿಸುತ್ತಾ ಬರಲಾಗಿದೆ. ಕಾಯಕ ಬಂಧುಗಳು ಇದನ್ನು ಸಮರ್ಕವಾಗಿ ಪ್ರಯೋಜನ ಪಡೆಯಲು ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಇಓ ಪರಮೇಶ್ವರ್ಪ, ನೀಡ್ಸ್ ಎಚ್.ಎಸ್. ಸುದೀರ, ಸೇರಿದಂತೆ ಸಂಘಟನೆಗಳ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಮತ್ತು ವನಸಿರಿ ಸಂಸ್ಥೆಯ ಸಿಬ್ಬಂದಿಗಳು 200ಕ್ಕೂ ಹೆಚ್ಚು ಕಾಯಕ ಬಂದುಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 