ದ್ವಿಭಾಷಾ ಬೋಧನಾ ನೀತಿ ಜಾರಿಗೆ ಸಮಸ್ಯೆ: ಪರಿಹಾರಕ್ಕೆ ಆಗ್ರಹ
Challenges in implementing the bilingual teaching policy: Demand for a solution
ಬಳ್ಳಾರಿ, ಆ. 14: ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ದ್ವಿಭಾಷಾ ಬೋಧನೆ ಜಾರಿಗೆ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆ ಹಲವು ಗೊಂದಲಗಳಿಗೆ ಕಾರಣವಾಗಿದ್ದು, ಕೂಡಲೇ ಸಮಸ್ಯೆ ಪರಿಹರಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಳ್ಳಾರಿ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಈ ಕುರಿತು ಶುಕ್ರವಾರ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ರಾಷ್ಟ್ರಪತಿಗಳಿಗೆ ಬಳ್ಳಾರಿ ಜಿಲ್ಲಾಧಿಕಾರಿಗಳ ಪರವಾಗಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಪಠ್ಯಪುಸ್ತಕಗಳ ಬೋಧನೆ ನಡೆಯುತ್ತಿದ್ದರೂ, ಪರೀಕ್ಷೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಪ್ರಶ್ನೆಗಳು ಒಂದೇ ರೀತಿಯಾಗಿವೆ. ಆದರೆ ಅಂಕ ನೀಡಿಕೆಯಲ್ಲಿ ಇಂಗ್ಲಿಷ್ ಭಾಷೆಯ ಉತ್ತರಕ್ಕೆ ‘ಎ ಪ್ಲಸ್’ ಹಾಗೂ ಕನ್ನಡ ಭಾಷೆಯ ಉತ್ತರಕ್ಕೆ ‘ಬಿ ಪ್ಲಸ್’ ಎಂಬ ಶ್ರೇಣಿ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಇಂತಹ ಕ್ರಮವನ್ನು ಮುಂದುವರಿಸಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಮಾತೃಭಾಷೆಯ ಕಲಿಕೆಯಿಂದ ಮಕ್ಕಳನ್ನು ದೂರ ಮಾಡುವ ಹುನ್ನಾರವಾಗಿದೆ ಎಂದು ಸಮಿತಿ ಆಕ್ಷೇಪಿಸಿದೆ. ದಿಢೀರ್ ಬದಲಾವಣೆಯಿಂದ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಉಂಟಾಗುವುದರ ಜೊತೆಗೆ ಕನ್ನಡ ಸಂಸ್ಕೃತಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದೆ.
ಇದಲ್ಲದೆ, ಶಾಲಾ ಶಿಕ್ಷಣ ಇಲಾಖೆಯು 15 ಸಾವಿರ ಶಿಕ್ಷಕರ ನೇಮಕಾತಿಗೆ ಕರಡು ಸೂಚನೆ ಹೊರಡಿಸಿದ್ದು, ಅದರಲ್ಲಿ ಕನ್ನಡ ಶಿಕ್ಷಕರ ನೇಮಕಾತಿಗೆ ಸೂಕ್ತ ಆದ್ಯತೆ ನೀಡಿಲ್ಲ ಎಂದು ಸಮಿತಿ ಆರೋಪಿಸಿದೆ. ವಿಜ್ಞಾನ ಮತ್ತು ಗಣಿತ ಸೇರಿದಂತೆ ಎಲ್ಲ ಭಾಷಾ ಶಿಕ್ಷಕರ ನೇಮಕಾತಿಗೆ ಸಮಾನ ಆದ್ಯತೆ ನೀಡಬೇಕಾದ ಸಂದರ್ಭದಲ್ಲಿ ಇಂಗ್ಲಿಷ್ ಭಾಷೆಗೆ ಹೆಚ್ಚಿನ ಮಹತ್ವ ನೀಡಿರುವುದು ಖಂಡನೀಯ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಪ್ರಮುಖರಾದ ಚಂದ್ರಿಕಾ ಚಂದ್ರಕಾಂತ್, ತಾಲ್ಲೂಕು ಅಧ್ಯಕ್ಷ ಶ್ರೀನಾಥ್ ಜೋಶಿ, ಜಿಲ್ಲಾ ಕಾರ್ಯದರ್ಶಿ ಯು. ರಮೇಶ್, ಚಾರುಲತಾ, ರವಿಕುಮಾರ್ ವಸಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 