ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭೇಟಿ
Chandramouleshwar Temple District Collector Snehal R. visit
ಹುಬ್ಬಳ್ಳಿ ಮಾ.25: ಇಂದು ಉಣಕಲ್ಲಿನಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರು ಭೇಟಿ ನೀಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಣಕಲ್ಲಿನಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನವು ಭಾರತೀಯ ಪುರಾತತ್ವ ಇಲಾಖೆ ಅಧೀನಕ್ಕೆ ಬರುತ್ತದೆ. ದೇವಸ್ಥಾನದ ಸುತ್ತಲೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಭೂ ಸ್ವಾಧೀನ ಪ್ರಕ್ರಿಯೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಇಂದು ಭೇಟಿ ನೀಡಿದ್ದೇನೆ.
ಅಲ್ಲದೇ ಉಣಕಲ್ ಕೆರೆ, ತೋಳನಕೆರೆ, ಜಯದೇವ ಆಸ್ಪತ್ರೆ ಹಾಗೂ ಕ್ರೀಡಾ ಸಂಕೀರ್ಣಕ್ಕೆ ಭೇಟಿ ನೀಡಿ ಪರೀಶೀಲನೆ ಮಾಡಲಾಗುವುದು. ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಭೇಟಿ ನೀಡಲಾಗಿದೆ. ಮುಂದೆ ಯಾವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ. ಅಲ್ಲದೇ ಅಧಿಕಾರಿಗಳಿಗೆ ಬೇಕಾದ ಸಹಾಯ, ಸಹಕಾರ ಹಾಗೂ ಸಲಹೆ ಸೂಚನೆಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.
ಅಲ್ಲದೇ ಈಗಾಗಲೇ ಎನ್‌ಒಸಿ ಕೂಡ ದೊರೆತಿದೆ. ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ದೇವಸ್ಥಾನದ ಸುತ್ತಲಿನ ಸುಮಾರು 33 ಮನೆಗಳನ್ನು ತೆರವುಗೊಳಿಸಲಾಗುವುದು. ಭಾರತೀಯ ಪುರಾತತ್ವ ಇಲಾಖೆಯು ಈ ದೇವಸ್ಥಾನವನ್ನು ಸ್ಮಾರಕವೆಂದು ಗುರುತಿಸಿದೆ. ಆ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಲೂ ಯಾವುದೇ ಮನೆಗಳನ್ನು ಇರಬಾರದು ಎಂದು ಪುರಾತತ್ವ ಇಲಾಖೆಯ ನಿಯಮಾವಳಿಗಳು ಸೂಚಿಸುತ್ತವೆ. ಸುಮಾರು 33 ಮನೆಗಳ ಮಾಲೀಕರಿಗೆ ಪರಿಹಾರಧನವನ್ನು ಒದಗಿಸಲಾಗುವುದು ಎಂದರು.
ದೇವಸ್ಥಾನವು 1,271 ಚ.ಮೀ. ವಿಸ್ತೀರ್ಣವನ್ನು ಹೊಂದಿದೆ. ಸುಮಾರು 3,901 ಚ.ಮೀ. ಪ್ರದೇಶವನ್ನು ಭೂ ಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಅಂದರೆ ಒಂದು ಎಕರೆಗೆ ಒಂದುವರೆ ಗುಂಟೆ ಜಾಗ ಕಡಿಮೆಯಿದೆ. ಭೂ ಸ್ವಾಧೀನ ಪಡಿಸಿಕೊಳ್ಳುವ ಸಲುವಾಗಿ ಸುಮಾರು ರೂ.9 ಕೋಟಿ ನೀಡಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಹಂತದಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು. ಜಿಲ್ಲೆಯಲ್ಲಿ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಅಭಾವವಿಲ್ಲ
ಅಮೆರಿಕಾ, ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಡುಗೆ ಅನಿಲ, ಪೆಟ್ರೋಲ, ಡಿಸೇಲ್ ಅಭಾವವಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತಪ್ಪು ಮಾಹಿತಿ ರವಾನೆಯಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ತಪ್ಪು ಮಾಹಿತಿ ಬಗ್ಗೆ ಯಾರು ಕೂಡ ಆತಂಕಕ್ಕೆ ಒಳಗಾಗಬಾರದು ಎಂದು ಸ್ಪಷ್ಟನೆಯನ್ನು ನೀಡಿವೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಕೂರತೆಯಿಲ್ಲ. ಜಿಲ್ಲೆಯಲ್ಲಿ ಪ್ರತಿ ನಿತ್ಯ ಸುಮಾರು 10 ಸಾವಿರ ಎಲ್‌ಪಿಜಿ ಸಿಲಿಂಡರ್‌ಗಳನ್ನು ಗೃಹ ಬಳಕೆಗೆ ಒದಗಿಸಲಾಗುತ್ತಿದೆ. ಅಲ್ಲದೇ 800 ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕಗೆ ನೀಡಲಾಗುತ್ತಿದೆ.
ಮೂರು ನಾಲ್ಕು ದಿನದ ವಿತರಣೆ ವಿಳಂಬವನ್ನು ಹಂತಹಂತವಾಗಿ ಸರಿಪಡಿಸಲಾಗುವುದು. ಬಿಪಿಸಿಎಲ್, ಎಚ್‌ಪಿಸಿಎಲ್ ಹಾಗೂ ಆಯ್‌ಒಸಿಎಲ್ ಕಂಪನಿಗಳು ಪೂರೈಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಅಕ್ಕಪಕ್ಕದ ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಪೆಟ್ರೋಲ್ ಮತ್ತು ಡಿಸೇಲ್ ದೊರೆಯುತ್ತಿಲ್ಲ, ಹೀಗಾಗಿ ಅಲ್ಲಿನ ಜನರು ಜಿಲ್ಲೆಗೆ ಬಂದು ಪೆಟ್ರೋಲ್ ಮತ್ತು ಡಿಸೇಲ್ ತೆಗೆದುಕೊಂಡು ಹೋಗುತ್ತಿದ್ದಾರೆ. ಬಹಳಷ್ಟು ಜನರು ಟ್ಯಾಂಕ್ ಮತ್ತು ಬ್ಯಾರೆಲ್‌ಗಳಲ್ಲಿ ತುಂಬಿಸಿಕೊಂಡು ಹೋಗಿರುವುದು ಗಮನಕ್ಕೆ ಬಂದಿದೆ. ಬ್ಯಾರೆಲ್ ಗಳಲ್ಲಿ ತುಂಬಿಸಿಕೊಂಡು ಇಟ್ಟುಕೊಂಡಿರುವುದು ಕಂಡು ಬಂದರೆ ಅವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುವುದು.
ಜಿಲ್ಲೆಯ ಎಲ್ಲಾ ಡಿಲರ್ಸಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಲಭ್ಯವಿದೆ. ಈಗಾಗಲೇ ಕಂಪನಿಗಳ ಜೊತೆ ಮಾತನಾಡಿ ಮೂರು ನಾಲ್ಕು ದಿನದಿಂದ ಉಂಟಾಗಿರುವ ಕೊರತೆಯನ್ನು ನೀಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಎಲ್ಲ ಪೆಟ್ರೋಲ್ ಬಂಕ್‌ಗಳು ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗುವುದು ಬೇಡ. ಜಿಲ್ಲೆಯಲ್ಲಿ ಸಾಮಾನ್ಯವಾಗಿ 60 ರಿಂದ 65 ಕೆಎಡಿಎಲ್ ಮಾರಾಟವಾಗುತ್ತಿತ್ತು. ಆದರೆ ಮೂರು ನಾಲ್ಕು ದಿನದಲ್ಲಿ ಸುಮಾರು 110 ಕೆಎಡಿಎಲ್ ಮಾರಾಟವಾಗಿದೆ. ಪೆಟ್ರೋಲ್ ಮತ್ತು ಡಿಸೇಲ್ ಅಭಾವದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಸಾರ್ವಜನಿಕರು ಯಾರೂ ಕೂಡ ಆತಂಕಕ್ಕೆ ಒಳಗಾಗಬಾರದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಘಾಳಿ, ಪಾಲಿಕೆಯ ಸಹಾಯಕ ಆಯುಕ್ತರಾದ ವಿಜಯಕುಮಾರ್, ಹುಬ್ಬಳ್ಳಿ ಶಹರ ತಹಶೀಲ್ದಾರ ಮಹೇಶ ಭಗವಂತ ಗಸ್ತೆ ಸೇರಿದಂತೆ ಪಾಲಿಕೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಲೋಹಿಯಾ ನಗರದ ಜಯದೇವ ಆಸ್ಪತ್ರೆ, ಕ್ರೀಡಾ ಸಂಕೀರ್ಣ ಹಾಗೂ ತೋಳನಕೆರೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 