ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಠದಿಂದ ಡಿ.ಕೆ.ಶಿವಕುಮಾರ ಅವರಿಗೆ ಗೌರವ ಶ್ರೀರಕ್ಷೆ
Chandrashekhar Shivacharya Swamiji Math offers honorary protection to D.K. Shivakumar
ಬೆಳಗಾವಿ 03 : ರಂಭಾಪುರಿ ಪೀಠದ ವೀರಗಂಗಾಧರ ಜಗದ್ಗುರುಗಳ ಭಾವ ಚಿತ್ರಕ್ಕೆ ಲೋಕಭವನದಲ್ಲಿಯೇ ನಮಸ್ಕರಿಸಿ ಡಿ.ಕೆ.ಶಿವಕುಮಾರ ಅವರು ಎಲ್ಲ ಧರ್ಮದ ಗುರುಗಳ ಸಮ್ಮುಖದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿರುವುದು ನಮಗೆ ಅತೀವ ಸಂತೋಷ ತಂದಿದೆ. ಅವರ ಆಡಳಿತ ಕರ್ನಾಟಕದ ಎಲ್ಲ ಭಾಗಕ್ಕೆ ಹೆಚ್ಚು ಪ್ರಗತಿ ಕಾರ್ಯಗಳಾಗಲಿ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ, ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಠದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಗೌರವ ಶ್ರೀರಕ್ಷೆ ನೀಡಿ ಆಶೀರ್ವದಿಸಿದರು.
ಬುಧವಾರ ಲೋಕಭವನದಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಶೇಷ ಆಮಂತ್ರಿತ ಸ್ವಾಮೀಜಿಗಳಾಗಿ ಸಾನಿಧ್ಯ ವಹಿಸಿದ್ದ ಶ್ರೀಗಳು ಆರ್ಶಿವಧಿಸಿದರು. ಇದೇ ಮೊಟ್ಟ ಮೊದಲ ಬಾರಿಗೆ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಲ್ಲ ಧರ್ಮದ ಗುರುಗಳ ಮುಂದೆ ಡಿ.ಕೆ.ಶಿವಕುಮಾರ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಅಭಿಮಾನದ ಸಂಗತಿ. ರಾಜ್ಯದ ಎಲ್ಲಾ ಭಾಗದ ಅಭಿವೃದ್ಧಿಗೆ ಒತ್ತು ನೀಡಿ ಅಭಿವೃದ್ಧಿ ಪಡಿಸಲಿದ ಎಂದು ಶುಭ ಹಾರೈಸಿದರು. ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಅವರು ಸಚಿವ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಅತೀವ ಸಂತೋಷ ತರಿಸಿದೆ. ಬಹುದೊಡ್ಡ ಜಿಲ್ಲೆಯಾದ ಬೆಳಗಾವಿ ಜಿಲ್ಲೆಗೆ ಸಚಿವ ಸ್ಥಾನ ದೊರೆಯುವಂತಾಗಲಿ ಎಂದು ಶ್ರೀಗಳು ನೂತನ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಶುಭ ಹಾರೈಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 